alex Certify
ಕನ್ನಡ ದುನಿಯಾ       Mobile App
       

Kannada Duniya

ಜನಾಭಿಪ್ರಾಯಕ್ಕೆ ಮಣಿದ ಸರ್ಕಾರ; ವರ್ಗಾವಣೆ ರದ್ದು

anu

ಕಾರ್ಮಿಕ ಸಚಿವ ಪರಮೇಶ್ವರ್ ನಾಯ್ಕ ಅವರ ಒತ್ತಡದಿಂದ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಡಿವೈಎಸ್ಪಿ ಅನುಪಮಾ ಶೆಣೈ ಅವರನ್ನು ವರ್ಗಾವಣೆ ಮಾಡಿದ್ದಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದು ಸರಿಯಲ್ಲ ಎಂದು ಹೇಳಲಾಗಿತ್ತು.

ಅನುಪಮಾ ಶೆಣೈ ಅವರ ವರ್ಗಾವಣೆ ರದ್ದುಪಡಿಸಬೇಕೆಂದು ಸಾರ್ವಜನಿಕರಿಂದ ವ್ಯಾಪಕ ಒತ್ತಾಯ ಕೇಳಿಬಂದ ಹಿನ್ನೆಲೆಯಲ್ಲಿ, ಸರ್ಕಾರ ಒತ್ತಡಕ್ಕೆ ಮಣಿದು ಅವರ ವರ್ಗಾವಣೆಯನ್ನು ರದ್ದು ಪಡಿಸಿದ್ದು, ಕೂಡ್ಲಿಗಿಗೆ ವಾಪಸ್ ನಿಯೋಜಿಸಲಾಗಿದೆ. ಕೂಡ್ಲಿಗಿಯಲ್ಲಿ ಅಕ್ರಮ ದಂಧೆಗಳಿಗೆ ಕಡಿವಾಣ ಹಾಕಿದ್ದ ಹಿನ್ನೆಲೆಯಲ್ಲಿ ಸಚಿವರು, ಅನುಪಮಾ ಶೆಣೈ ಅವರನ್ನು ವರ್ಗಾವಣೆ ಮಾಡಿಸಿದ್ದರು. ಮೊದಲಿಗೆ ತಾವು ವರ್ಗಾವಣೆ ಮಾಡಿಸಿಲ್ಲ ಎಂದು ಹೇಳಿದ್ದರಾದರೂ, ಕಾರ್ಯಕರ್ತರ ಸಭೆಯೊಂದರಲ್ಲಿ ತಾವೇ ವರ್ಗಾವಣೆ ಮಾಡಿಸಿರುವ ವಿಷಯವನ್ನು ಬಾಯ್ಬಿಟ್ಟಿದ್ದರು.

ಸಚಿವರು ವರ್ಗಾವಣೆ ಮಾಡಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿ ವರ್ಗಾವಣೆ ರದ್ದುಪಡಿಸಬೇಕೆಂದು ಒತ್ತಾಯಿಸಲಾಗಿತ್ತು. ಇದಕ್ಕೆ ಮಣಿದ ಸರ್ಕಾರ ವರ್ಗಾವಣೆ ರದ್ದು ಮಾಡಿದ್ದು, ಮಾಜಿ ಸಂಸದೆ ರಮ್ಯಾ ಅವರು ಗೃಹಸಚಿವರನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ ಭೇಟಿ ಮಾಡಿದ ಬಳಿಕ ಅನುಪಮಾ ಅವರ ವರ್ಗಾವಣೆ ರದ್ದಾಗಲಿದೆ ಎಂದು ಟ್ವೀಟ್ ಮಾಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...