alex Certify
ಕನ್ನಡ ದುನಿಯಾ       Mobile App
       

Kannada Duniya

ನವೆಂಬರ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಶಿಕ್ಷಕ ಸಮುದಾಯ

ವಿವಿಧ ಕಾರಣಗಳನ್ನು ಹೇಳಿಕೊಂಡು ಕಳೆದ ಎರಡು ವರ್ಷಗಳಿಂದ ಮುಂದೂಡುತ್ತಲೇ ಬಂದಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಈ ಬಾರಿ ಆರಂಭಗೊಂಡ ವೇಳೆ ಶಿಕ್ಷಕ ಸಮುದಾಯ ಸಂತಸಗೊಂಡಿತ್ತು.

ನವೆಂಬರ್ 3 ರಂದು ನಡೆಯಲಿರುವ ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಮತ್ತೆಲ್ಲಿ ಕೌನ್ಸೆಲಿಂಗ್ ಮುಂದೂಡಿಕೆಯಾಗುತ್ತದೋ ಎಂಬ ಆತಂಕದಲ್ಲಿದ್ದ ಶಿಕ್ಷಕ ಸಮುದಾಯ, ಚುನಾವಣಾ ಆಯೋಗ ಪ್ರಕ್ರಿಯೆ ನಡೆಸಲು ಗ್ರೀನ್ ಸಿಗ್ನಲ್ ನೀಡಿದ ಬಳಿಕ ನೆಮ್ಮದಿಯ ನಿಟ್ಟುಸಿರು ಬಿಟ್ಟಿತ್ತು.

ಆದರೆ ವರ್ಗಾವಣೆ ಬಯಸಿದ್ದ ಶಿಕ್ಷಕರ ಈ ನೆಮ್ಮದಿ ಬಹುಕಾಲ ಉಳಿಯಲಿಲ್ಲ. ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಯಿತಾದರೂ ಮೊದಲ ದಿನದಿಂದಲೂ ಗೊಂದಲದ ಗೂಡಾಗಿತ್ತು. ವರ್ಗಾವಣೆಗೆ ಸೂಕ್ತ ನೀತಿ ರೂಪಿಸದಿರುವುದು, ತಂತ್ರಾಂಶದಲ್ಲಿ ದೋಷ ಮೊದಲಾದ ಕಾರಣಗಳಿಂದಾಗಿ ವಿಳಂಬವಾಗುತ್ತಲೇ ಹೋಯಿತು.

ಇದೀಗ ರಾಜ್ಯ ಸರ್ಕಾರ ಅಧಿಕೃತವಾಗಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಮುಂದಿನ ವರ್ಷಕ್ಕೆ ಮುಂದೂಡಿದೆ. ಇದರಿಂದಾಗಿ ಕಳೆದೆರಡು ವರ್ಷಗಳಿಂದ ವರ್ಗಾವಣೆಗಾಗಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದ ಶಿಕ್ಷಕ ಸಮುದಾಯದ ಸಹನೆಯ ಕಟ್ಟೆ ಒಡೆದಿದೆ. ಈಗ ಬೀದಿಗಿಳಿದು ಹೋರಾಡಲು ಶಿಕ್ಷಕರು ನಿರ್ಧರಿಸಿದ್ದು, ನವೆಂಬರ್ 5 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಠಾವಧಿ ಮುಷ್ಕರ ನಡೆಸಲು ಸಿದ್ಧತೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...