alex Certify
ಕನ್ನಡ ದುನಿಯಾ       Mobile App
       

Kannada Duniya

ಆನ್ ಲೈನ್ ನಲ್ಲೇ ಸುಲಭವಾಗಿ ಪಡೆಯಿರಿ ಡಿಎಲ್

ram 18 sa

ಬೆಂಗಳೂರು: ಕೆಲಸ ಕಾರ್ಯಗಳಿಗೆ ಸರ್ಕಾರಿ ಕಚೇರಿಗಳಿಗೆ ಅಲೆಯುವುದೆಂದರೆ ಅಲರ್ಜಿ. ಕೆಲವು ಕಚೇರಿಗಳಲ್ಲಿ ನಿಗದಿತ ಸಮಯಕ್ಕೆ ಕೆಲಸ ಆಗುವುದಿಲ್ಲ ಎಂಬುದು ಸಾಮಾನ್ಯ ವಿಷಯ. ಅದರಲ್ಲಿಯೂ ಆರ್.ಟಿ.ಓ. ಇಲಾಖೆಯಲ್ಲಿ ಬೇಗ ಕೆಲಸ ಆಗಲ್ಲ ಎಂಬ ದೂರುಗಳಿವೆ.

ಆರ್.ಟಿ.ಓ. ಇಲಾಖೆಯಲ್ಲಿ ಬೇಗನೆ ಕೆಲಸ ಆಗಬೇಕೆಂದರೆ ಮಧ್ಯವರ್ತಿಗಳ ಮೂಲಕ ಹೋಗಬೇಕೆಂದು ಕೆಲವರು ಹೇಳುತ್ತಾರೆ. ಬೇಗನೆ ಕೆಲಸ ಆಗಲ್ಲ ಎಂದು ದೂರುತ್ತಾರೆ. ಇದಕ್ಕೆಲ್ಲಾ ಕಡಿವಾಣ ಹಾಕಿ ವ್ಯವಸ್ಥೆಯನ್ನು ಇನ್ನಷ್ಟು ಜನಸ್ನೇಹಿಯಾಗಿ ರೂಪಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಸಚಿವ ರಾಮಲಿಂಗಾ ರೆಡ್ಡಿ, ಯಲಹಂಕ ಉಪನಗರದ ಸಾರಿಗೆ ಇಲಾಖೆ ಕಚೇರಿಯಲ್ಲಿ ಕೇಂದ್ರ ಸರ್ಕಾರದ ರಸ್ತೆ ಮತ್ತು ಹೆದ್ದಾರಿ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಡ್ರೈವಿಂಗ್ ಲೈಸೆನ್ಸ್ ಗೆ ಸಂಬಂಧಿಸಿದ ‘ಸಾರಥಿ-4’ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ.

ಸಾರಿಗೆ ಇಲಾಖೆಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ಇನ್ನುಮುಂದೆ ಆನ್ ಲೈನ್ ಮೂಲಕವೇ ಮಾಡಿಕೊಳ್ಳಬಹುದಾಗಿದೆ. ಡಿ.ಎಲ್.ಗಾಗಿ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು. ಪರವಾನಿಗೆ ನೀಡುವ ದಿನದಂದು ಮಾತ್ರ ಕಚೇರಿಗೆ ಬಂದರೆ ಸಾಕು. ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಈ ವ್ಯವಸ್ಥೆ ಜಾರಿಯಲ್ಲಿರಲಿದೆ. ಸದ್ಯಕ್ಕೆ ಬೆಂಗಳೂರಿನಲ್ಲಿ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಇನ್ನೂ ಹಲವು ಸರ್ಕಾರಿ ಸೇವೆಗಳಿಗೆ ಆನ್ ಲೈನ್ ಮೂಲಕವೇ ವ್ಯವಸ್ಥೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...