alex Certify
ಕನ್ನಡ ದುನಿಯಾ       Mobile App
       

Kannada Duniya

ಜುಲೈ 25 ರಂದು ಸಾರಿಗೆ ನೌಕರರ ಮುಷ್ಕರ

ksrtc bus

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅಧ್ಯಕ್ಷತೆಯಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳ ಕುರಿತಂತೆ ನಡೆದ ಸಭೆ ವಿಫಲವಾಗಿದೆ. ನಿಗಮಗಳ ನೌಕರರ ಸಂಘದ ಪದಾಧಿಕಾರಿಗಳು, ಶೇ.35 ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದಾರೆ.

ಸರ್ಕಾರ ಶೇ.10 ರಷ್ಟು ವೇತನ ಹೆಚ್ಚಳಕ್ಕೆ ಒಪ್ಪಿದ್ದು, ಇದಕ್ಕೆ ನೌಕರರ ಸಂಘಟನೆಗಳು ಒಪ್ಪಿಲ್ಲವಾದ್ದರಿಂದ ಮಾತುಕತೆ ವಿಫಲವಾಗಿದೆ. ಜುಲೈ 25 ರಂದು ಸಾರಿಗೆ ನಿಗಮದ ನೌಕರರು ಮುಷ್ಕರ ನಡೆಸಲಿದ್ದು, ಸುಮಾರು 20 ಸಾವಿರ ಬಸ್ ಗಳ ಸಂಚಾರ ಸ್ಥಗಿತವಾಗಲಿದೆ ಎನ್ನಲಾಗಿದೆ. ಈ ಮೊದಲು ಶೇ.8 ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ತೀರ್ಮಾನ ಕೈಗೊಂಡಿತ್ತು. ಇದಕ್ಕೆ ಒಪ್ಪದ ನೌಕರರು ಶೇ.30 ರಷ್ಟು ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದಾರೆ. ಮತ್ತೊಮ್ಮೆ ಮಾತುಕತೆ ನಡೆಸಿದರೆ ಸಮಸ್ಯೆ ಸರಿಯಾಗಲಿದೆ ಎಂದು ಹೇಳಲಾಗಿದೆ.

ವೇತನವನ್ನು ಶೇ.10 ರಷ್ಟು ಹೆಚ್ಚಳ ಮಾಡಿದರೆ, 4 ವರ್ಷಕ್ಕೆ 1414 ಕೋಟಿ ರೂ.ಹೊರೆಯಾಗುತ್ತದೆ ಎನ್ನಲಾಗಿದ್ದು, ವೇತನ ಹೆಚ್ಚಳ ಸೇರಿದಂತೆ ಸುಮಾರು 41 ಬೇಡಿಕೆಗಳನ್ನು ಸಾರಿಗೆ ನಿಗಮಗಳ ನೌಕರರು, ಸರ್ಕಾರದ ಮುಂದೆ ಇಟ್ಟಿದ್ದು, ಅವುಗಳನ್ನು ಈಡೇರಿಸುವ ಬಗ್ಗೆ ಮತ್ತೊಮ್ಮೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...