alex Certify
ಕನ್ನಡ ದುನಿಯಾ       Mobile App
       

Kannada Duniya

ಮರ್ಮಾಂಗಕ್ಕೆ ಬಾಸುಂಡೆ ಬರುವಂತೆ ಹಲ್ಲೆ

ಮಂಗಳೂರು: ಮರಗಳವು ಆರೋಪದಡಿ ವ್ಯಕ್ತಿಯೊಬ್ಬನಿಗೆ ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಪುದಬೆಟ್ಟು ಗ್ರಾಮದ ವ್ಯಕ್ತಿಯನ್ನು ಮರಗಳವು ಆರೋಪದ ಮೇಲೆ ವಶಕ್ಕೆ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಸೆಪ್ಟಂಬರ್ 26 ರಂದು ಧರ್ಮಸ್ಥಳದ ಅರಣ್ಯ ಇಲಾಖೆ ಕ್ವಾಟ್ರಸ್ ಗೆ ಕರೆದೊಯ್ದು ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ನೀಡಿದ್ದಾರೆ.

ಮರ್ಮಾಂಗಕ್ಕೆ ಬಾಸುಂಡೆ ಬರುವಂತೆ ಬಾರಿಸಿದ್ದಾರೆ. ಅಲ್ಲದೇ, ವಾಪಸ್ ಕಳಿಸುವಾಗ ಯಾರೂ ಒತ್ತಡ ಹಾಕಿಲ್ಲ, ಹೊಡೆದಿಲ್ಲ ಎಂದು ಬಲವಂತವಾಗಿ ಬರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಗಂಭೀರ ಸ್ಥಿತಿಯಲ್ಲಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮರ ಕಳವು ಮಾಡಿರುವುದಾಗಿ ಒಪ್ಪಿಕೊಳ್ಳುವಂತೆ ಹಲ್ಲೆ ಮಾಡಿದ ಅರಣ್ಯ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಪುದಬೆಟ್ಟು ಗ್ರಾಮಸ್ಥರು ಹಾಗೂ ಹಲ್ಲೆಗೊಳಗಾದ ವ್ಯಕ್ತಿಯ ಕುಟುಂಬದವರು ಪ್ರತಿಭಟನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...