alex Certify
ಕನ್ನಡ ದುನಿಯಾ       Mobile App
       

Kannada Duniya

ಈಶ್ವರಪ್ಪ ನೇತೃತ್ವದಲ್ಲಿ ಸಭೆ

kse

ತುಮಕೂರು: ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರವಾಗಿ, ಆಗಿರುವ ಬೆಳವಣಿಗೆಗಳ ಕುರಿತು ಚರ್ಚಿಸಲು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಸಮಾಲೋಚನಾ ಸಭೆ ಕರೆಯಲಾಗಿದೆ.

ತುಮಕೂರು ಹೊರ ವಲಯದಲ್ಲಿರುವ ಮಾಜಿ ಸಚಿವ ಸೊಗಡು ಶಿವಣ್ಣ ಅವರ ಮನೆಯಲ್ಲಿ ಸಭೆ ನಡೆಯಲಿದ್ದು, 20 ಕ್ಕೂ ಅಧಿಕ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಲಬುರಗಿಯಲ್ಲಿ ನಡೆಯಲಿರುವ ಸಂಧಾನ ಸಭೆಯಲ್ಲಿ ಚರ್ಚಿಸಬೇಕಿರುವ ವಿಷಯಗಳ ಕುರಿತಾಗಿ, ಇಂದಿನ ಸಭೆಯಲ್ಲಿ ಮುಖಂಡರು ಸಮಾಲೋಚನೆ ನಡೆಸಲಿದ್ದಾರೆ.

ಶಿವಮೊಗ್ಗದಲ್ಲಿ ಬಿ.ಜೆ.ಪಿ. ಕಚೇರಿಯಲ್ಲೇ ಯಡಿಯೂರಪ್ಪ ಮತ್ತು ಈಶ್ವರಪ್ಪ ಬೆಂಬಲಿಗರು ಬಡಿದಾಡಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಇಂದು ಸಭೆ ನಡೆಯುತ್ತಿರುವುದು ಮಹತ್ವ ಪಡೆದುಕೊಂಡಿದೆ.

ಪಕ್ಷದ ಪದಾಧಿಕಾರಿಗಳ ಪಟ್ಟಿ ಮರು ಪರಿಶೀಲನೆ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿಚಾರ, ಕೆಲವರಿಗೆ ನೋಟಿಸ್ ನೀಡಿರುವುದು ಮತ್ತು ಉಚ್ಛಾಟನೆ ಮಾಡಿರುವ ಬಗ್ಗೆ ಈಶ್ವರಪ್ಪ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...