alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಭೋವಿ ಗುರುಪೀಠದ ಶ್ರೀಗಳಿಗೆ ಗಾಯ

acc-tum

ತುಮಕೂರು: ಚಿತ್ರದುರ್ಗದ ಭೋವಿ ಗುರುಪೀಠದ ಶ್ರೀಗಳು ಪ್ರಯಾಣಿಸುತ್ತಿದ್ದ ಕಾರ್, ತುಮಕೂರು ಸಮೀಪ ಅಪಘಾತಕ್ಕೀಡಾಗಿದೆ

ಘಟನೆಯಲ್ಲಿ ಇಮ್ಮಡಿ ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರು ಮಂಡ್ಯದಿಂದ ಚಿತ್ರದುರ್ಗಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಗೊಲ್ಲರಹಟ್ಟಿ ಸಮೀಪ ಹಸು ಅಡ್ಡ ಬಂದಿದ್ದು, ಅದನ್ನು ತಪ್ಪಿಸಲು ಹೋಗಿ, ಲಾರಿಗೆ ಕಾರ್ ಡಿಕ್ಕಿ ಹೊಡೆದಿದೆ.

ಶ್ರೀಗಳಿಗೆ ಕುಣಿಗಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿ.ಜಿ.ಎಸ್. ಆಸ್ಪತ್ರೆಗೆ ಸೇರಿಸಲಾಗಿದೆ.

ಈ ಸಂಬಂಧ ಹುಲಿಯೂರು ದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...