alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ತುಮಕೂರು: ತುಮಕೂರು ಸಮೀಪದ ಬೆಳಗುಂಬ ಬಳಿ ಖಾಸಗಿ ಬಸ್ ಡಿಕ್ಕಿಯಾಗಿ, ಆಟೊದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತುಮಕೂರಿನ ಸದಾಶಿವ ನಗರ ನಿವಾಸಿಗಳಾದ ಮಾರುತಿ(16), ನಾಗೇಶ್(20), ಫಹದತ್ ಕಾನ್(22) ಮೃತಪಟ್ಟವರೆಂದು ಗುರುತಿಸಲಾಗಿದೆ. ವಸಂತ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.

ದೇವರಾಯನದುರ್ಗಕ್ಕೆ ತೆರಳಿದ್ದ ಇವರೆಲ್ಲಾ ಆಟೊದಲ್ಲಿ ವಾಪಸ್ ಬರುವಾಗ, ಹಿಂಬದಿಯಿಂದ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಆಟೊ ನಜ್ಜುಗುಜ್ಜಾಗಿದ್ದು, ಮೃತದೇಹಗಳು ದೂರದವರೆಗೂ ಬಿದ್ದಿದ್ದವು. ಕ್ಯಾತ್ಸಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...