alex Certify
ಕನ್ನಡ ದುನಿಯಾ       Mobile App
       

Kannada Duniya

ಮಕ್ಕಳ ಕಳ್ಳರ ವದಂತಿ, ಬೆಚ್ಚಿಬಿದ್ದ ಗ್ರಾಮಸ್ಥರು

ತುಮಕೂರು ಜಿಲ್ಲೆಯ ಕೆಲವೆಡೆ ಮಕ್ಕಳ ಕಳ್ಳರು ಆಗಮಿಸಿದ್ದಾರೆ ಎಂಬ ಗಾಳಿ ಸುದ್ದಿ ಹರಡಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.

ಮಕ್ಕಳನ್ನು ಅಪಹರಿಸುವ ಕಳ್ಳರು ಅಂಗಾಂಗಗಳನ್ನು ಕದಿಯುತ್ತಾರೆ ಎಂಬ ವದಂತಿಯಿಂದ ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಆತಂಕ ಮೂಡಿದೆ. ಹೀಗೆ ವದಂತಿ ಹರಡಿರುವ ಬೆನ್ನಲ್ಲೇ ಪೊನ್ನಸಮುದ್ರ ಗ್ರಾಮದ ಯುವತಿ ನಾಪತ್ತೆಯಾಗಿರುವುದು ಗ್ರಾಮಸ್ಥರ ಆತಂಕವನ್ನು ಹೆಚ್ಚಿಸಿದೆ.

ಆಂಧ್ರಪ್ರದೇಶದಿಂದ ಆಗಮಿಸಿರುವ ಮಕ್ಕಳ ಕಳ್ಳರು, ಹಳ್ಳಿಗಳಲ್ಲಿ ಮಕ್ಕಳನ್ನು ಅಪಹರಿಸಿ ಅವರ ಅಂಗಾಂಗಗಳನ್ನು ಕದಿಯುತ್ತಾರೆ ಎನ್ನುವ ವದಂತಿ ಹರಡಿದೆ. ಇದರೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ಇಂತಹ ಸುದ್ದಿಗಳನ್ನು ಹರಿಬಿಡಲಾಗಿದ್ದು, ಪಾವಗಡ ತಾಲ್ಲೂಕಿನ ಪೊನ್ನಸಮುದ್ರ, ಪಳ್ಳವಳ್ಳಿ, ಕೆ. ರಾಂಪುರ ಮೊದಲಾದ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ. ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...