alex Certify
ಕನ್ನಡ ದುನಿಯಾ       Mobile App
       

Kannada Duniya

ಪುಕ್ಸಟ್ಟೆ ಮೊಟ್ಟೆಗಾಗಿ ಮುಗಿಬಿದ್ದ ಜನ

ತುಮಕೂರು: ಅಪಘಾತದಲ್ಲಿ ರಸ್ತೆಗೆ ಬಿದ್ದ ಲಕ್ಷಾಂತರ ಮೊಟ್ಟೆಗಳನ್ನು ತೆಗೆದುಕೊಳ್ಳಲು ಜನ ಮುಗಿಬಿದ್ದ ಘಟನೆ ತುಮಕೂರು ಜಿಲ್ಲೆ ಶಿರಾ ಸಮೀಪದ ಕಳ್ಳಂಬೆಳ್ಳ ಬಳಿ ನಡೆದಿದೆ.

ಹೊಸಪೇಟೆಯಿಂದ ಬೆಂಗಳೂರಿಗೆ ಸಾಗುತ್ತಿದ್ದ ಮೊಟ್ಟೆ ತುಂಬಿದ ಕ್ಯಾಂಟರ್, ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಪಂಕ್ಚರ್ ಆಗಿ ನಿಂತಿದೆ.

ಹಿಂಬದಿಯಿಂದ ಬಂದ ಸರ್ಕಾರಿ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಕ್ಯಾಂಟರ್ ನಲ್ಲಿದ್ದ ಸುಮಾರು 6 ಲಕ್ಷ ರೂ. ಮೌಲ್ಯದ ಮೊಟ್ಟೆ ರಸ್ತೆಗೆ ಬಿದ್ದಿವೆ.

ಇದನ್ನು ತಿಳಿದ ಸುತ್ತಮುತ್ತಲಿನ ಗ್ರಾಮಗಳ ಜನ, ರಸ್ತೆಯಲ್ಲಿ ಬಿದ್ದಿದ್ದ ಮೊಟ್ಟೆಗಳನ್ನು ತುಂಬಿಕೊಳ್ಳಲು ಮುಗಿಬಿದ್ದಿದ್ದಾರೆ. ಕೆಲವರು ಟ್ರೇ ಸಮೇತ ಮೊಟ್ಟೆಯನ್ನು ತೆಗೆದುಕೊಂಡು ಹೋಗಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಜನರನ್ನು ನಿಯಂತ್ರಿಸಲು ಹರಸಾಹಸ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...