alex Certify
ಕನ್ನಡ ದುನಿಯಾ       Mobile App
       

Kannada Duniya

BJP ಟಿಕೆಟ್ ಆಕಾಂಕ್ಷಿ ಹತ್ಯೆಗೆ ಯತ್ನ…?

ತುಮಕೂರು: ಬಿ.ಜೆ.ಪಿ. ಟಿಕೆಟ್ ಆಕಾಂಕ್ಷಿ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿದೆ. ಉದ್ದೇಶಪೂರ್ವಕವಾಗಿ ನಡೆದ ಅಪಘಾತವಿರಬಹುದೆಂದು ಹೇಳಲಾಗಿದೆ.

ಚಿಕ್ಕನಾಯ್ಕನಹಳ್ಳಿ ಬಿ.ಜೆ.ಪಿ. ಟಿಕೆಟ್ ಆಕಾಂಕ್ಷಿ ಮಂಜುಳಾ ನಾಗರಾಜ್ ಅವರು ಪ್ರಚಾರ ಮುಗಿಸಿ ರಾತ್ರಿ ಕಾರಿನಲ್ಲಿ ತೆರಳುವಾಗ, ಅತಿವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಅಪಘಾತದ ಬಳಿಕ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ.

ಕಾರಿನ ಮುಂಭಾಗ ಜಖಂಗೊಂಡಿದ್ದು, ಮಂಜುಳಾ ಅವರ ಕಾಲಿಗೆ ತೀವ್ರ ಪೆಟ್ಟಾಗಿದೆ. ಕಾರಿನಲ್ಲಿದ್ದ ನಾಲ್ವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಮಂಜುಳಾ ನಾಗರಾಜ್ ಚಿಕ್ಕನಾಯ್ಕನಹಳ್ಳಿಯಲ್ಲಿ ಬಿ.ಜೆ.ಪಿ. ಟಿಕೆಟ್ ಆಕಾಂಕ್ಷಿಯಾಗಿದ್ದು, ಈಗಾಗಲೇ ಪ್ರಚಾರ ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...