alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಚ್ಚಿ ಬೀಳಿಸುವಂತಿದೆ ರಾಜ್ಯದಲ್ಲಿ ನಡೆಯುತ್ತಿರುವ ಭಯಾನಕ ಕೃತ್ಯ

ತುಮಕೂರು: ಇಷ್ಟವಾದ ಮಹಿಳೆಯನ್ನು ಅಪಹರಿಸಿ, 3 -4 ದಿನಗಳ ಕಾಲ ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬಳಿಕ ವಾಪಸ್ ಕಳಿಸುವ ಹೇಯಕೃತ್ಯ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ನಡೆಯುತ್ತಿದೆ.

ಬಲವಂತವಾಗಿ ಮಹಿಳೆಯರನ್ನು ಅಪಹರಿಸಿ ಸರಣಿ ಅತ್ಯಾಚಾರ ಎಸಗುತ್ತಿರುವ ಕಿರಾತಕರು, ಯಾರಿಗೂ ವಿಷಯ ತಿಳಿಸದಂತೆ ಗ್ರಾಮಸ್ಥರನ್ನು ಬೆದರಿಸುತ್ತಿದ್ದಾರೆ. ಈ ಆಘಾತಕಾರಿ ಮಾಹಿತಿಯನ್ನು ಹೊರ ಹಾಕಿದ್ದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ.

ಪಾವಗಡ ತಾಲ್ಲೂಕಿನ ನಿಡಗಲ್ಲು ಗ್ರಾಮದಲ್ಲಿ ಮಾಜಿ ಶಾಸಕ ಹಾಗೂ ಆತನ ಪುತ್ರನ ಬೆಂಬಲವಿರುವ ದುಷ್ಕರ್ಮಿಗಳ ಗುಂಪು ಅನೇಕ ವರ್ಷಗಳಿಂದ ದೌರ್ಜನ್ಯ ನಡೆಸುತ್ತಿದೆ.

ಒಂಟಿಯಾಗಿರುವ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಲಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯೊಬ್ಬರು ನೀಡಿದ ಮಾಹಿತಿ ಆಧರಿಸಿ ಮಹಿಳಾ ಆಯೋಗದ ಅಧ್ಯಕ್ಷರು ಗ್ರಾಮಕ್ಕೆ ಭೇಟಿ ನೀಡಿ ವಿಚಾರಿಸಿದಾಗ ಈ ಭಯಾನಕ ಸಂಗತಿ ಬಯಲಾಗಿದೆ.

ನಾಗಲಕ್ಷ್ಮಿ ಬಾಯಿ ಅವರ ಮಾಹಿತಿ ಪಡೆದು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ದೂರದ ರಾಜ್ಯಗಳಲ್ಲಿ ನಡೆಯುತ್ತಿದ್ದ ಇಂತಹ ವಿದ್ಯಮಾನ ರಾಜ್ಯದಲ್ಲಿಯೇ ನಡೆಯುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...