alex Certify
ಕನ್ನಡ ದುನಿಯಾ       Mobile App
       

Kannada Duniya

ಸಹಪಾಠಿಗೆ ಕಿರುಕುಳ: ರೋಡ್ ರೋಮಿಯೋಗೆ ಥಳಿಸಿದ ವಿದ್ಯಾರ್ಥಿಗಳು

ತುಮಕೂರು: ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೋಗೆ ವಿದ್ಯಾರ್ಥಿಗಳು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ವಡ್ಡರಹಳ್ಳಿ ನಿವಾಸಿಯಾಗಿರುವ ನವೀನ್ ಎಂಬಾತ, ತುಮಕೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ದುಂಬಾಲು ಬಿದ್ದು ಇನ್ನಿಲ್ಲದ ಕಿರುಕುಳ ನೀಡಿದ್ದಾನೆ.

ತರಗತಿಗೂ ಬಂದು ಕಿರುಕುಳ ನೀಡಿದ್ದನ್ನು ಗಮನಿಸಿದ ವಿದ್ಯಾರ್ಥಿನಿಯ ಸಹಪಾಠಿಗಳು ನವೀನ್ ನನ್ನು ಪ್ರಶ್ನಿಸಿದ್ದಾರೆ. ಆತ ಉದ್ಧಟತನದಿಂದ ವರ್ತಿಸಿದಾಗ, ಹೊರಗೆ ಎಳೆದುಕೊಂಡು ಬಂದು ಥಳಿಸಿದ್ದು, ಪೊಲೀಸರಿಗೆ ಒಪ್ಪಿಸಿದ್ದಾರೆ. ಹೊಸ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...