alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ದುಡುಕಿದ ಯುವಕ

ತುಮಕೂರು: ಮದುವೆಯಾಗಲು ಹುಡುಗಿ ಸಿಗಲಿಲ್ಲವೆಂಬ ಕಾರಣಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕಿನಲ್ಲಿ ನಡೆದಿದೆ.

ಮಾಯಸಂದ್ರ ಸೀಗೆಹಳ್ಳಿಯ 35 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡವರು. ಮದುವೆ ವಯಸ್ಸಿಗೆ ಬಂದಿದ್ದ ಯುವಕನಿಗೆ ಮದುವೆ ಮಾಡಲು ಪೋಷಕರು ಹಾಗೂ ಸಂಬಂಧಿಕರು ಅನೇಕ ಯುವತಿಯರನ್ನು ನೋಡಿದ್ದರೂ ಮದುವೆ ಕೂಡಿ ಬಂದಿರಲಿಲ್ಲ.

ತನಗೆ ಮದುವೆಯಾಗಲು ಹುಡುಗಿ ಸಿಗಲಿಲ್ಲ ಎಂದು ಮನನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುರುವೇಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...