alex Certify
ಕನ್ನಡ ದುನಿಯಾ       Mobile App
       

Kannada Duniya

ಆರೋಗ್ಯದಲ್ಲಿ ಚೇತರಿಕೆ: ಶ್ರೀಗಳಿಂದ ಇಷ್ಟಲಿಂಗ ಪೂಜೆ

shree

ತುಮಕೂರು: ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಬೆಳಿಗ್ಗೆ ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ.

ಜ್ವರ ಮತ್ತು ದಣಿವಾಗಿದ್ದರಿಂದ ಶ್ರೀಗಳ ಆರೋಗ್ಯದಲ್ಲಿ ವ್ಯತ್ಯಾಸವಾಗಿತ್ತು. ತಜ್ಞ ವೈದ್ಯರ ತಂಡ ಮಠದಲ್ಲೇ ಸ್ವಾಮೀಜಿಗೆ ಚಿಕಿತ್ಸೆ ನೀಡಿದೆ.

ರಾತ್ರಿ ಲಘು ಉಪಾಹಾರ ಸೇವಿಸಿದ ಶ್ರೀಗಳು ಬೆಳಿಗ್ಗೆ 6.30 ರ ಬಳಿಕ ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ. ಶ್ರೀಗಳು ಪ್ರತಿದಿನ ಮುಂಜಾನೆಯೇ ಇಷ್ಟಲಿಂಗ ಪೂಜೆ ನೆರವೇರಿಸುತ್ತಾರೆ.

ಅನಾರೋಗ್ಯದ ಕಾರಣ ಇಂದು ಬೆಳಿಗ್ಗೆಯ ನಂತರ ಪೂಜೆ ಮಾಡಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಅಗತ್ಯ ಬಿದ್ದರೆ ಮಾತ್ರ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುವುದು ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...