alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಸಂಭ್ರಮ

sree-swamiji

ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ 110 ನೇ ಜನ್ಮ ದಿನೋತ್ಸವ ಸಂಭ್ರಮದಲ್ಲಿ ಅಪಾರ ಭಕ್ತರು ಪಾಲ್ಗೊಂಡಿದ್ದಾರೆ.

ನೂರಾರು ಸ್ವಾಮೀಜಿಗಳು, ವಿವಿಧ ಕ್ಷೇತ್ರಗಳ ಗಣ್ಯರು ದೇಶ, ವಿದೇಶಗಳಿಂದಲೂ ಭಕ್ತರು ಆಗಮಿಸಿದ್ದಾರೆ. ಬೆಳಗಿನ ಜಾವವೇ ಸ್ವಾಮೀಜಿ ಎಂದಿನಂತೆ ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ.

ಬೆಳಿಗ್ಗೆಯಿಂದಲೇ ವಿಶೇಷ ಪೂಜೆ, ಅನ್ನದಾಸೋಹ ನಡೆಯುತ್ತಿವೆ. ತುಮಕೂರು ನಗರ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ.

ವಿವಿಧೆಡೆಯಿಂದ ಆಗಮಿಸಿರುವ ಸಾಂಸ್ಕೃತಿಕ ಕಲಾತಂಡಗಳ ಕಲಾವಿದರು ಪ್ರದರ್ಶನ ನೀಡುವ ಮೂಲಕ ಸ್ವಾಮೀಜಿಗೆ ನಮನ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶ್ರೀಗಳ ಜನ್ಮ ದಿನೋತ್ಸವಕ್ಕೆ ಶುಭಾಶಯ ಕೋರಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...