alex Certify
ಕನ್ನಡ ದುನಿಯಾ       Mobile App
       

Kannada Duniya

ಸದನಕ್ಕೆ ಬರ್ತಾರಾ ಇಬ್ಬರು ಕಾಂಗ್ರೆಸ್ ಶಾಸಕರು…?

ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ವಿಶ್ವಾಸಮತ ಯಾಚಿಸಲಿರುವ ಹಿನ್ನಲೆಯಲ್ಲಿ ಅಧಿವೇಶನ ಆರಂಭವಾಗಿದೆ. ನೂತನವಾಗಿ ಆಯ್ಕೆಯಾದ ಶಾಸಕರುಗಳು ಪ್ರಮಾಣವಚನ ಸ್ವೀಕರಿಸುತ್ತಿದ್ದು, ಹಂಗಾಮಿ ಸ್ಪೀಕರ್ ಕೆ.ಜಿ. ಬೋಪಯ್ಯ, ಶಾಸಕರಿಗೆ ಪ್ರಮಾಣವಚನ ಬೋಧಿಸುತ್ತಿದ್ದಾರೆ.

ಈ ಮಧ್ಯೆ ಚುನಾವಣಾ ಫಲಿತಾಂಶ ಪ್ರಕಟಗೊಂಡಾಗಿನಿಂದಲೂ ಕಾಂಗ್ರೆಸ್ ನಾಯಕರ ‘ಕೈ’ಗೆ ಸಿಗದೆ ನಾಪತ್ತೆಯಾಗಿದ್ದ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಹಾಗೂ ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಇಂದು ಸದನಕ್ಕೆ ಹಾಜರಾಗಿ ಪ್ರಮಾಣವಚನ ಸ್ವೀಕರಿಸುತ್ತಾರಾ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.

ಈ ಶಾಸಕರುಗಳು ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ತಂಗಿದ್ದಾರೆಂಬ ಮಾತುಗಳು ಕೇಳಿ ಬರುತ್ತಿದ್ದು, ಮಾಜಿ ಸಚಿವ ಎಂ.ಬಿ. ಪಾಟೀಲ್ ಈ ಶಾಸಕರುಗಳನ್ನು ಸದನಕ್ಕೆ ಕರೆ ತರಲು ತೆರಳಿದ್ದಾರೆನ್ನಲಾಗಿದೆ. 1 ಗಂಟೆ ಸುಮಾರಿಗೆ ಈ ಇಬ್ಬರು ಕಾಂಗ್ರೆಸ್ ಶಾಸಕರು ಸದನಕ್ಕೆ ಬರಲಿದ್ದಾರೆನ್ನಲಾಗುತ್ತಿದ್ದು, ಒಂದೊಮ್ಮೆ ಕಲಾಪದಲ್ಲಿ ಹಾಜರಾದರೆ ಪಕ್ಷದ ವಿಪ್ ಪಾಲಿಸುತ್ತಾರೋ ಅಥವಾ ಬಿಜೆಪಿಯನ್ನು ಬೆಂಬಲಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...