alex Certify
ಕನ್ನಡ ದುನಿಯಾ       Mobile App
       

Kannada Duniya

ಸಮಾಧಿಯಲ್ಲಿದ್ದ ಶವಗಳ ತಲೆ ಬುರುಡೆ ಒಯ್ದ ದುಷ್ಕರ್ಮಿಗಳು

ಒಂದು ವರ್ಷದ ಹಿಂದೆ ಸಾವನ್ನಪ್ಪಿದ್ದ ಇಬ್ಬರು ವ್ಯಕ್ತಿಗಳ ತಲೆ ಬುರುಡೆಯನ್ನು ಸಮಾಧಿಯಿಂದ ತೆಗೆದುಕೊಂಡು ಹೋಗಿರುವ ಘಟನೆ ತುಮಕೂರಿನ ಶಿರಾ ತಾಲೂಕಿನ ಬಿದರಕೆರೆ ಗ್ರಾಮದಲ್ಲಿ ನಡೆದಿದೆ.

ಕಳೆದ ವರ್ಷ ಗ್ರಾಮದ ಕಲ್ಲಿಕೋಟೆಯ ದೇವರಾಜ್ ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದರೆ, ಮಂಜುನಾಥ್ ಎಂಬುವರು ಅನಾರೋಗ್ಯಕ್ಕೀಡಾಗಿ ಸಾವನ್ನಪ್ಪಿದ್ದರು. ಇವರಿಬ್ಬರ ಶವಗಳನ್ನು ಗ್ರಾಮದಲ್ಲಿ ಸಮಾಧಿ ಮಾಡಲಾಗಿತ್ತು. ಆದರೆ ಈಗ ದುಷ್ಕರ್ಮಿಗಳು ಈ ಇಬ್ಬರ ಸಮಾಧಿಯನ್ನು ಅಗೆದು ಎರಡೂ ಶವಗಳ ತಲೆ ಬುರುಡೆಯನ್ನು ತೆಗೆದುಕೊಂಡು ಹೋಗಿದ್ದಾರೆ.

ಈ ಘಟನೆ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದು, ಯಾವ ಕಾರಣಕ್ಕೆ ತಲೆ ಬುರುಡೆಯನ್ನು ತೆಗೆದುಕೊಂಡು ಹೋಗಲಾಗಿದೆ ಎಂಬುದು ತಿಳಿದುಬಂದಿಲ್ಲ. ತಾವರೆಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...