alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣದ ಹೊರವಲಯದಲ್ಲಿ ಎರಡು ಸರ್ಕಾರಿ ಬಸ್ಸುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿ, ಹತ್ತಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಜೇವರ್ಗಿ ತಾಲೂಕು ಕ್ರೀಡಾಂಗಣದ ಬಳಿ ಅಪಘಾತ ಸಂಭವಿಸಿದೆ. ಒಂದು ಬಸ್ಸಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪ್ರಯಾಣಿಕರೊಬ್ಬರೂ ಸಾವಿಗೀಡಾಗಿದ್ದಾರೆ.

ಅಪಘಾತದ ತೀವ್ರತೆಗೆ ಒಂದು ಬಸ್ ಪಲ್ಟಿ ಹೊಡೆದಿದ್ದು, ಪ್ರಯಾಣಿಕರು ನಿದ್ರೆಯ ಮಂಪರಿನಲ್ಲಿದ್ದ ಕಾರಣ ಎಚ್ಚೆತ್ತುಕೊಳ್ಳುವಷ್ಟರಲ್ಲಿ ಭೀಕರ ದುರಂತ ನಡೆದು ಹೋಗಿದೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...