alex Certify
ಕನ್ನಡ ದುನಿಯಾ       Mobile App
       

Kannada Duniya

ಪರಸ್ಪರ ಚಾಕು ಇರಿದುಕೊಂಡು ಸಾವನ್ನಪ್ಪಿದ ಯುವಕರು

ಇಬ್ಬರು ಯುವಕರು ಪರಸ್ಪರ ಚಾಕು ಇರಿದುಕೊಂಡು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಅಜಂತಾ ಹೋಟೆಲ್ ಬಳಿ ನಿನ್ನೆ ತಡರಾತ್ರಿ ನಡೆದಿದೆ.

ರಿಯಾಜ್ ಸವಣೂರು ಹಾಗೂ ಫರ್ಹಾನ್ ಹನಸಿ ಸಾವನ್ನಪ್ಪಿದ ಯುವಕರಾಗಿದ್ದು, ಗೆಳೆಯರಾಗಿದ್ದ ಇವರುಗಳು ಯುವತಿಯೊಬ್ಬಳ ವಿಚಾರಕ್ಕೆ ಆಗಾಗ ಜಗಳವಾಡುತ್ತಿದ್ದರೆನ್ನಲಾಗಿದೆ.

ನಿನ್ನೆ ರಾತ್ರಿ ಸ್ಟೇಷನ್ ರಸ್ತೆಯಲ್ಲಿರುವ ಅಜಂತಾ ಹೋಟೆಲ್ ಬಳಿ ಇಬ್ಬರ ನಡುವೆ ಮತ್ತೆ ಜಗಳವಾಗಿದ್ದು, ಇದು ವಿಕೋಪಕ್ಕೆ ಹೋದ ವೇಳೆ ಪರಸ್ಪರ ಚಾಕು ಇರಿದುಕೊಂಡಿದ್ದಾರೆ. ಇವರುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...