alex Certify
ಕನ್ನಡ ದುನಿಯಾ       Mobile App
       

Kannada Duniya

ಪುತ್ತಿಗೆ ಬಳಿ ಅಪಘಾತದಲ್ಲಿ ಇಬ್ಬರ ಸಾವು, ಹಲವರಿಗೆ ಗಾಯ

ಉಡುಪಿ: ಉಡುಪಿ ಜಿಲ್ಲೆ ಕಾಪು ತಾಲ್ಲೂಕಿನ ಪುತ್ತಿಗೆ ಬಳಿ ನಡೆದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.

ಪೆರ್ಡೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಬೈಕ್ ಸವಾರರಾದ ವರುಣ್(19), ವಿಶ್ವಾಸ್(20) ಮೃತಪಟ್ಟವರು. ಅವರಿಗೆ ಹೆಬ್ರಿ ಕಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಇದೇ ಮಾರ್ಗದಲ್ಲಿ ಬರುತ್ತಿದ್ದ ಬಸ್ ಅಪಘಾತ ತಪ್ಪಿಸಲು ಹೋಗಿ ಪಲ್ಟಿಯಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಹಿರಿಯಡ್ಕ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...