alex Certify
ಕನ್ನಡ ದುನಿಯಾ       Mobile App
       

Kannada Duniya

ನಾಲ್ವರ ಆತ್ಮಹತ್ಯೆಗೆ ಕಾರಣವಾಯ್ತಾ ನಕಲಿ ಚಿನ್ನ?

udupi-dd

ಉಡುಪಿ: ಕಟಪಾಡಿಯ ಪಡುಬೆಳ್ಳೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಳ್ಳಲು ನಕಲಿ ಚಿನ್ನವೇ ಕಾರಣ ಎನ್ನಲಾಗಿದೆ.

ಶಂಕರ ಆಚಾರ್ಯ, ಅವರ ಪತ್ನಿ, ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದು, ವಂಚನೆ ಬಯಲಾಗುವ ಭೀತಿಯಿಂದ ಇಂತಹ ನಿರ್ಧಾರ ಕೈಗೊಂಡಿರಬಹುದೆಂದು ಹೇಳಲಾಗಿದೆ.

ಶಂಕರ ಆಚಾರ್ಯ 3 ಕೆ.ಜಿ. ನಕಲಿ ಚಿನ್ನವನ್ನು ಅಡವಿಟ್ಟು ಬ್ಯಾಂಕಿನಲ್ಲಿ ಸಾಲ ಪಡೆದುಕೊಂಡಿದ್ದರು. ಸುಮಾರು 8 ವರ್ಷಗಳಿಂದ ಬ್ಯಾಂಕಿನಲ್ಲಿ ಅವರು ವ್ಯವಹಾರ ನಡೆಸಿದ್ದು, 93 ಸಲ ಚಿನ್ನದ ಮೇಲೆ ಸಾಲ ಪಡೆದುಕೊಂಡಿದ್ದರು.

ಶಂಕರ ಆಚಾರ್ಯ ಕುಟುಂಬ ಆತ್ಮಹತ್ಯೆ ಮಾಡಿಕೊಂಡ ಬಳಿಕ, ಬ್ಯಾಂಕಿನ ವ್ಯವಸ್ಥಾಪಕರು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ಚಿನ್ನದ ಗುಣಮಟ್ಟ ಪರೀಕ್ಷಿಸಲಾಗಿದೆ.

ಶಂಕರ ಆಚಾರ್ಯ 3 ಕೆ.ಜಿ. ನಕಲಿ ಚಿನ್ನ ಇಟ್ಟಿರುವುದು ಗೊತ್ತಾಗಿದೆ. ಬ್ಯಾಂಕಿನ ಚಿನ್ನ ಪರೀಕ್ಷಕ ನಕಲಿ ಚಿನ್ನವನ್ನೇ ಅಸಲಿ ಎಂದು ಸರ್ಟಿಫಿಕೇಟ್ ಕೊಟ್ಟಿದ್ದಾರೆ.

ಅಲ್ಲದೇ, ಬ್ಯಾಂಕಿನ ವ್ಯವಸ್ಥಾಪಕರು ಕೂಡ ನಿಯಮಗಳನ್ನು ಉಲ್ಲಂಘಿಸಿ ಸಾಲ ಕೊಟ್ಟಿದ್ದಾರೆ. ಪೊಲೀಸ್ ವಿಚಾರಣೆ ಸಂದರ್ಭದಲ್ಲಿ ಈ ವಿಷಯಗಳು ಬೆಳಕಿಗೆ ಬಂದಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...