alex Certify
ಕನ್ನಡ ದುನಿಯಾ       Mobile App
       

Kannada Duniya

‘ಶೀಘ್ರವೇ ರಾಮಮಂದಿರ ನಿರ್ಮಾಣ’

ಉಡುಪಿ: ಉಡುಪಿಯ ರಾಯಲ್ ಗಾರ್ಡನ್ ಮೈದಾನದಲ್ಲಿ ನವೆಂಬರ್ 24, 25 ರಂದು ಧರ್ಮ ಸಂಸತ್ ಸಮಾವೇಶ ನಡೆಯಲಿದೆ.

ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಹಿಂದೂ ಸಂಘಟನೆಯ ನಾಯಕ ಪ್ರವೀಣ್ ಭಾಯ್ ತೊಗಾಡಿಯಾ, ಶೀಘ್ರದಲ್ಲೇ ರಾಮಮಂದಿರ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಉಡುಪಿಯಲ್ಲಿ ನಡೆಯುತ್ತಿರುವ ಧರ್ಮ ಸಂಸತ್ ನಲ್ಲಿ ರಾಮಮಂದಿರ ನಿರ್ಮಾಣ ಕುರಿತಂತೆ ಪ್ರಮುಖವಾಗಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಇದು ರಾಜಕೀಯ ಉದ್ದೇಶಿತ ಕಾರ್ಯಕ್ರಮವಲ್ಲ. ಶೀಘ್ರವೇ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಧರ್ಮ ಸಂಸತ್ ನಲ್ಲಿ ದೇಶದ ವಿವಿಧೆಡೆಯಿಂದ ಸಂತರು, ಮಠಾಧೀಶರು ಸೇರಿ ಅನೇಕರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.

ಆರ್.ಎಸ್.ಎಸ್. ಸರಸಂಘ ಚಾಲಕ ಮೋಹನ್ ಭಾಗವತ್ ಉದ್ಘಾಟನಾ ಸಮಾರಂಭದಲ್ಲಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ನವೆಂಬರ್ 26 ರಂದು ಉಡುಪಿ ಎ.ಜಿ.ಎಂ. ಕಾಲೇಜ್ ಮೈದಾನದಲ್ಲಿ ಬೃಹತ್ ಹಿಂದೂ ಸಮಾಜೋತ್ಸವ ನಡೆಯಲಿದ್ದು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾಷಣ ಮಾಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...