alex Certify
ಕನ್ನಡ ದುನಿಯಾ       Mobile App
       

Kannada Duniya

ಕುತೂಹಲ ಮೂಡಿಸಿದೆ ಸ್ವಾಮೀಜಿ ರಾಜಕೀಯ ನಡೆ

ಉಡುಪಿ: ಉಡುಪಿ ಶೀರೂರು ಮಠಾಧೀಶರಾದ ಶ್ರೀ ಲಕ್ಷ್ಮಿವರ ತೀರ್ಥ ಸ್ವಾಮೀಜಿ ರಾಜಕೀಯಕ್ಕೆ ಎಂಟ್ರಿ ಕೊಡಲು ಮುಂದಾಗಿದ್ದು, ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ತಿಳಿಸಿದ್ದಾರೆ.

ಲಕ್ಷ್ಮಿವರ ತೀರ್ಥರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ತೀರ್ಮಾನಿಸಿದ್ದು, ಒಂದು ವೇಳೆ ಬಿ.ಜೆ.ಪಿ. ಟಿಕೆಟ್ ಸಿಕ್ಕರೆ, ಬಿ.ಜೆ.ಪಿ.ಯಿಂದಲೇ ಸ್ಪರ್ಧಿಸುವುದಾಗಿ ಹೇಳಿದ್ದಾರೆ.

ರಾಜಕೀಯದಲ್ಲಿ ಧರ್ಮವಿರಬೇಕು. ಉಡುಪಿಯಲ್ಲಿ ರಾಜಕೀಯ ವ್ಯವಸ್ಥೆ ಸರಿಯಾಗಿಲ್ಲ. ಸರ್ಕಾರಿ ಅಧಿಕಾರಿಗಳ ದರ್ಪ ಜಾಸ್ತಿಯಾಗಿದೆ. ವ್ಯವಸ್ಥೆಗಳು ಸರಿಯಾಗಿಲ್ಲವಾದ್ದರಿಂದ ಕಳೆದ 15 ದಿನಗಳಿಂದ ಯೋಚಿಸಿ ರಾಜಕೀಯಕ್ಕೆ ಬರಲು ತೀರ್ಮಾನಿಸಿದ್ದಾಗಿ ಅವರು ತಿಳಿಸಿದ್ದಾರೆ.

ಜನಸೇವೆಯನ್ನು ಮಾಡುತ್ತಿದ್ದೇನೆ. ಇನ್ನಷ್ಟು ಜನಸೇವೆಯನ್ನು ಮಾಡಲು ರಾಜಕೀಯ ಶಕ್ತಿ ಕೂಡ ಬೇಕಿದೆ. ಇದನ್ನು ಮನಗಂಡು ನಾನು ರಾಜಕೀಯಕ್ಕೆ ಪ್ರವೇಶಿಸಲು ತೀರ್ಮಾನಿಸಿದ್ದೇನೆ ಎಂದು ಹೇಳಿದ್ದಾರೆ.

ಈಗಾಗಲೇ ಭಕ್ತರು, ಹಿತೈಷಿಗಳೊಂದಿಗೆ ಚರ್ಚಿಸಿದ್ದು, ರಾಜಕೀಯದ ಸಾಧಕಗಳು, ಬಾಧಕಗಳ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಂಡಿದ್ದೇನೆ. ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಮಾದರಿ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಸಚಿವ ಪ್ರಮೋದ್ ಮಧ್ವರಾಜ್ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರ ವಿರುದ್ಧ ಸ್ಪರ್ಧಿಸಬೇಕೆಂದು ಸ್ಪರ್ಧಿಸುತ್ತಿಲ್ಲ. ಜನರ ಸೇವೆ ಮಾಡುವ ಉದ್ದೇಶದಿಂದ ರಾಜಕೀಯಕ್ಕೆ ಪ್ರವೇಶಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...