alex Certify
ಕನ್ನಡ ದುನಿಯಾ       Mobile App
       

Kannada Duniya

ಒಂದು ಮತದ ಅಂತರದಿಂದ ಗೆಲುವು ಸಾಧಿಸಿದ ಅಭ್ಯರ್ಥಿಗಳಿವರು

ಬಳ್ಳಾರಿ: ಮತದಾರನ ಒಂದು ವೋಟು ಕೂಡ ಎಷ್ಟು ಅಮೂಲ್ಯ ಎಂಬುದಕ್ಕೆ ಈ ಚುನಾವಣಾ ಫಲಿತಾಂಶ ಸಾಕ್ಷಿಯಾಗಿದೆ. ತೀವ್ರ ಕುತೂಹಲ ಮೂಡಿಸಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ಬಿಜೆಪಿ ಅಭ್ಯರ್ಥಿಗಳಾದ ಹಾಲಪ್ಪ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಹುರ್ಮತ್ ಬೇಗಮ್ ಕೇವಲ ಒಂದು ಮತಗಳ ಅಂತರದಿಂದ ಅಚ್ಚರಿ ರೀತಿಯಲ್ಲಿ ಗೆಲುವು ಸಾಧಿಸಿದ್ದಾರೆ.

ಕುಡುತನಿ ಪಟ್ಟಣ ಪಂಚಾಯ್ತಿ 5ನೇ ವಾರ್ಡ್ ಬಿಜೆಪಿ ಅಭ್ಯರ್ಥಿ ಕೆ.ಎಂ. ಹಾಲಪ್ಪ, ಕಾಂಗ್ರೆಸ್ ಅಭ್ಯರ್ಥಿ ಬಿ. ಸ್ವಾಮಿ ಅವರ ವಿರುದ್ಧ 281 ಮತಗಳನ್ನು ಗಳಿಸಿ ಒಂದು ಮತದ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಕೈ ಅಭ್ಯರ್ಥಿ ಬಿ. ಸ್ವಾಮಿ ಅವರಿಗೆ 280 ಮತಗಳು ಬಿದ್ದಿವೆ.

ಇನ್ನು ಬೀದರ್ ನ ಹುಮ್ನಾಬಾದ್ ನ ಹಳ್ಳಿಖೇಡ ಪುರಸಭೆಯಲ್ಲಿ ವಾರ್ಡ್ ನಂ.21 ರ ಕಾಂಗ್ರೆಸ್ ಅಭ್ಯರ್ಥಿ ಹುರ್ಮತ್ ಬೇಗಂ ಕೂಡ ಒಂದು ಮತದ ಅಂತರದಿಂದ ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವಿಜಯಲಕ್ಷ್ಮಿ ನೆಹರು ವಿರುದ್ಧ 121 ಮತಗಳನ್ನು ಪಡೆದು ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅವರಿಗೆ 120 ಮತಗಳು ಬಿದ್ದಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...