alex Certify
ಕನ್ನಡ ದುನಿಯಾ       Mobile App
       

Kannada Duniya

ಉತ್ತರ ಕರ್ನಾಟಕದಲ್ಲಿ ಎಂದಿನಂತೆ ಸಾಗಿದೆ ಜನಜೀವನ

ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಇಂದು ಕರೆ ನೀಡಲಾಗಿದ್ದ ಉತ್ತರ ಕರ್ನಾಟಕ ಬಂದ್ ನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಈ ಭಾಗದ ಅಭಿವೃದ್ಧಿ ಕುರಿತಂತೆ ನೀಡಿರುವ ಭರವಸೆ ಹಿನ್ನೆಲೆಯಲ್ಲಿ ಹಿಂಪಡೆಯಲಾಗಿದ್ದು, ಎಂದಿನಂತೆ ಜನ ಜೀವನ ಸಾಗಿದೆ.

ಕೆಲವರು ಬಂದ್ ಮಾಡಲು ಮುಂದಾಗಿದ್ದರೂ ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಇದಕ್ಕೆ ಯಾವುದೇ ರೀತಿಯ ಬೆಂಬಲ ವ್ಯಕ್ತವಾಗಿಲ್ಲ. ವಾಹನ ಸಂಚಾರ ಎಂದಿನಂತಿದ್ದು, ಶಾಲಾ-ಕಾಲೇಜುಗಳು ಕಾರ್ಯ ನಿರ್ವಹಿಸಲಿವೆ.

ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಸಾಂಕೇತಿಕ ಪ್ರತಿಭಟನೆ ನಡೆಸಲು ಕೆಲ ಸಂಘಟನೆಗಳು ಮುಂದಾಗಿದ್ದು, ಬಳಿಕ ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...