alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳಿನ ಉತ್ತರ ಕರ್ನಾಟಕ ಬಂದ್ ಕುರಿತು ಮುಖಂಡರು ಹೇಳಿದ್ದೇನು…?

ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಆಗಸ್ಟ್ 2 ರಂದು ಉತ್ತರ ಕರ್ನಾಟಕದ 13 ಜಿಲ್ಲೆಗಳ ಬಂದ್ ಗೆ ಕರೆ ನೀಡಲಾಗಿತ್ತು. ಆದರೆ ಇದಕ್ಕೆ ಕನ್ನಡ ಪರ ಸಂಘಟನೆಗಳು ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು.

ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಉತ್ತರ ಕರ್ನಾಟಕ ಭಾಗದ ಮುಖಂಡರೊಂದಿಗೆ ಚರ್ಚೆ ನಡೆಸಿ ಆ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ತಿಳಿಸಿದ್ದರಲ್ಲದೆ ಬೆಳಗಾವಿಯನ್ನು ಎರಡನೇ ರಾಜಧಾನಿಯನ್ನಾಗಿ ಮಾಡಲು ಬದ್ಧವಾಗಿರುವುದಾಗಿ ಹೇಳಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರೂ ಸಹ ಪ್ರತಿಭಟನಾನಿರತರೊಂದಿಗೆ ಮಾತನಾಡಿ, ಉತ್ತರ ಕರ್ನಾಟಕ ಭಾಗದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಲು ಸಿದ್ಧವಿದ್ದು, ಯಾವುದೇ ಕಾರಣಕ್ಕೂ ಪ್ರತ್ಯೇಕ ರಾಜ್ಯದ ಬೇಡಿಕೆ ಮಂಡಿಸುವುದು ಬೇಡವೆಂದು ಮನವಿ ಮಾಡಿದ್ದರು.

ಇದಕ್ಕೆ ಮಣಿದಿರುವ ಪ್ರತಿಭಟನಾಕಾರರು ನಾಳಿನ ಬಂದ್ ಕರೆಯನ್ನು ಹಿಂಪಡೆದಿದ್ದಾರೆ. ಉತ್ತರ ಕರ್ನಾಟಕ ಜನತೆಯ ಸಮಸ್ಯೆಗಳಿಗೆ ಜನಪ್ರತಿನಿಧಿಗಳು ಸ್ಪಂದಿಸಿ ಅವುಗಳನ್ನು ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...