alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ವಿ. ಸೋಮಣ್ಣ

v somannaವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮಾಜಿ ಸಚಿವ ವಿ. ಸೋಮಣ್ಣ, ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಗೆ ನಾಳೆ ಬೆಳಿಗ್ಗೆ 10-30 ಕ್ಕೆ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರಲ್ಲದೇ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ನೇತೃತ್ವದಲ್ಲಿ ಎದುರಿಸಲಿದ್ದು, ಅವರೇ ಮುಖ್ಯಮಂತ್ರಿಯಾಗಲಿದ್ದಾರೆಂದು ಹೇಳಿದರು.

ಯಡಿಯೂರಪ್ಪನವರ ನಾಯಕತ್ವದಲ್ಲಿ ಬಿಜೆಪಿ ಮುಖಂಡರುಗಳು ಒಗ್ಗಟ್ಟಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೆಲಸ ಮಾಡಲಿದ್ದು, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ತಿಳಿಸಿದ ಅವರು, ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಈ ಬಾರಿ ರಾಜಸ್ಥಾನದಿಂದ ರಾಜ್ಯಸಭೆಗೆ ಕಣಕ್ಕಿಳಿಯುತ್ತಿರುವುದಾಗಿ ಸ್ಪಷ್ಟಪಡಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...