alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ವೈ. ವಿಜಯೇಂದ್ರಗೆ ಖಚಿತವಾಯ್ತು ಬಿ.ಜೆ.ಪಿ. ಟಿಕೆಟ್…?

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಗೆಲುವಿಗೆ ಕಾರ್ಯತಂತ್ರ ರೂಪಿಸುತ್ತಿರುವ ಬಿ.ಜೆ.ಪಿ. ಅಳೆದು, ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡ್ತಿದೆ.

ವರುಣಾ ಕ್ಷೇತ್ರದಲ್ಲಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲು ಪಕ್ಷದ ನಾಯಕರು ಮುಂದಾಗಿದ್ದಾರೆ. ಯಲಹಂಕದ ಹೋಟೆಲ್ ನಲ್ಲಿ ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ಬಿ.ಜೆ.ಪಿ. ನಾಯಕರು ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ.

ವರುಣಾ ಕ್ಷೇತ್ರದಲ್ಲಿ 16 ಮಂದಿ ಆಕಾಂಕ್ಷಿಗಳಿದ್ದು, ಅವರಲ್ಲಿ ಬಿ.ವೈ. ವಿಜಯೇಂದ್ರ ಅವರ ಹೆಸರು ಪ್ರಸ್ತಾಪಿಸಿದಾಗ ಎಲ್ಲರೂ ಸಹಮತ ವ್ಯಕ್ತಪಡಿಸಿದ್ದಾರೆ. ವರುಣಾ ಕ್ಷೇತ್ರಕ್ಕೆ ಬಹುತೇಕ ವಿಜಯೇಂದ್ರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಅವರೇ ಅಭ್ಯರ್ಥಿಯಾಗುವುದು ಖಚಿತವಾಗಿದೆ.

ವರುಣಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಿ.ಎಂ. ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ವರುಣಾದಲ್ಲಿ ಅವರ ಪುತ್ರ ಡಾ. ಯತೀಂದ್ರ ಸ್ಪರ್ಧಿಸಲಿದ್ದಾರೆ. ವರುಣಾದಲ್ಲಿ ಸಿ.ಎಂ. ಪುತ್ರ ಹಾಗೂ ಮಾಜಿ ಸಿ.ಎಂ. ಪುತ್ರ ಮುಖಾಮುಖಿಯಾಗುವುದು ಖಚಿತವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...