alex Certify
ಕನ್ನಡ ದುನಿಯಾ       Mobile App
       

Kannada Duniya

ವರುಣಾದಲ್ಲಿ ಕಾರ್ಯಕರ್ತನ ಆತ್ಮಹತ್ಯೆ ನೋವು ತಂದಿದೆ: ಬಿ.ಎಸ್.ವೈ.

ಬೆಂಗಳೂರು: ವರುಣಾ ವಿಧಾನಸಭೆ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಅವರಿಗೆ ವಿಶೇಷ ಕಾರಣದಿಂದ ಟಿಕೆಟ್ ನೀಡಿಲ್ಲ ಎಂದು ಬಿ.ಜೆ.ಪಿ. ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ವಿಜಯೇಂದ್ರಗೆ ಟಿಕೆಟ್ ತಪ್ಪಿದ್ದಕ್ಕೆ ಕಾರ್ಯಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ನೋವು ತಂದಿದೆ ಎಂದು ಮಲ್ಲೇಶ್ವರಂ ಬಿ.ಜೆ.ಪಿ. ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕಾರ್ಯಕರ್ತರಿಗೆ ಕೈ ಮುಗಿದು ಮನವಿ ಮಾಡುತ್ತೇನೆ. ಯಾರೂ ಇಂತಹ ಕೆಲಸ ಮಾಡಿಕೊಳ್ಳಬಾರದು ಎಂದು ಹೇಳಿದ್ದಾರೆ.

ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ 20 ದಿನದಲ್ಲಿಯೇ ಎಲ್ಲರ ಪ್ರೀತಿ, ವಿಶ್ವಾಸ ಗಳಿಸಿದ್ದರು. ವಿಜಯೇಂದ್ರ ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ. ನಾನೂ ಅವರ ಮನೆಗೆ ಭೇಟಿ ನೀಡುತ್ತೇನೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...