alex Certify
ಕನ್ನಡ ದುನಿಯಾ       Mobile App
       

Kannada Duniya

ಸಿ.ಎಂ. ಸರ್ವೇಯಲ್ಲಿ ಬಯಲಾಯ್ತು ಅಸಲಿ ಸತ್ಯ

ವಿಧಾನಸಭೆ ಚುನಾವಣೆಯಲ್ಲಿ ಗೆಲುವಿಗೆ ಕಾರ್ಯತಂತ್ರ ರೂಪಿಸಿರುವ ರಾಜಕೀಯ ಪಕ್ಷಗಳು, ಸರ್ವೇ ಮೂಲಕ ಅಭ್ಯರ್ಥಿಗಳ ಆಯ್ಕೆ, ಗೆಲುವಿನ ಸಾಧ್ಯಾಸಾಧ್ಯತೆಗಳ ಮಾಹಿತಿ ಸಂಗ್ರಹಿಸಿವೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ತಾವು ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರವನ್ನು ಪುತ್ರ ಡಾ. ಯತೀಂದ್ರ ಅವರಿಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕೆ ಇಳಿಯಲು ಸಿದ್ಧತೆ ನಡೆಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವಿನ ಸಾಧ್ಯತೆ ಕುರಿತಾಗಿ ಸಿ.ಎಂ. ನಡೆಸಿದ ಸಮೀಕ್ಷೆಯಲ್ಲಿ ಸತ್ಯ ಗೊತ್ತಾಗಿದೆ.

ಈ ಕ್ಷೇತ್ರದಲ್ಲಿ ಜಿ.ಟಿ. ದೇವೇಗೌಡ ಸ್ಪರ್ಧಿಸಲಿದ್ದು, ಸಿ.ಎಂ. ಸೋಲಿಗೆ ಜಿ.ಟಿ. ದೇವೇಗೌಡ, ಹೆಚ್. ವಿಶ್ವನಾಥ್, ಶ್ರೀನಿವಾಸ ಪ್ರಸಾದ್ ಒಂದಾಗಲಿದ್ದಾರೆ. ಗೆಲುವಿನ ಅಂತರ ಶೇ. 5 ಕ್ಕಿಂತ ಕಡಿಮೆ ಇದೆ ಎಂಬುದು ಸಮೀಕ್ಷೆಯಲ್ಲಿ ಗೊತ್ತಾಗಿದೆ ಎನ್ನಲಾಗಿದೆ.

ಈ ಕಾರಣದಿಂದ ಸಿ.ಎಂ. ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿಯದೇ ವರುಣಾದಿಂದಲೇ ಸ್ಪರ್ಧಿಸಲು ಚಿಂತನೆ ನಡೆಸಿದ್ದಾರೆ. ವರುಣಾದಲ್ಲಿ ಪುತ್ರನಿಗೆ ಟಿಕೆಟ್ ಕೊಟ್ಟರೆ, ಹಿರಿಯ ಕಾಂಗ್ರೆಸ್ ನಾಯಕರು ತಮ್ಮ ಮಕ್ಕಳು, ಕುಟುಂಬದವರಿಗೆ ಟಿಕೆಟ್ ಕೇಳುವ ಸಾಧ್ಯತೆ ಜಾಸ್ತಿ ಇದೆ. ಹಾಗಾಗಿ ಒಂದೇ ಕಲ್ಲಿಗೆ 2 ಹಕ್ಕಿ ಹೊಡೆಯಲು ಪ್ಲಾನ್ ಮಾಡಿದ್ದಾರೆ.

ಬೇರೆ ನಾಯಕರ ಮಕ್ಕಳ ಟಿಕೆಟ್ ಬೇಡಿಕೆಗೆ ಕಡಿವಾಣ ಹಾಕುವುದು ಮತ್ತು ತಾವು ಸುರಕ್ಷಿತ ಕ್ಷೇತ್ರವನ್ನು ನೋಡಿಕೊಳ್ಳುವ ಉದ್ದೇಶದಿಂದ ವರುಣಾದಲ್ಲೇ ಸ್ಪರ್ಧಿಸಲು ಯೋಜಿಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...