alex Certify
ಕನ್ನಡ ದುನಿಯಾ       Mobile App
       

Kannada Duniya

ಬಹಿರಂಗವಾದ ಬಿ.ಎಸ್.ವೈ. ವಿಡಿಯೊದಲ್ಲಿ ಏನಿದೆ..?

Yeddyurappa

ಬೆಂಗಳೂರು: ಲೋಕಸಭೆ ಸದಸ್ಯ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ವಿಡಿಯೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿರುವ ವಿಡಿಯೊ ಇದಾಗಿದೆ.

ಯಡಿಯೂರಪ್ಪನವರು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಇನ್ನುಮುಂದೆ ಹಿಂದೂ ಯುವಕರನ್ನು ಬಂಧಿಸದಂತೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಹಿಂದೂ ಯುವಕರಿಗೆ ಕಿರುಕುಳ ನೀಡಬೇಡಿ. 14-15 ಹಿಂದೂ ಹುಡುಗರನ್ನು ಅರಸೀಕೆರೆಯಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಬಂಧಿಸಿ ಕಿರುಕುಳ ನೀಡಲಾಗುತ್ತಿದೆ. ಹಾಗೆಲ್ಲಾ ಮಾಡಬೇಡಿ ಎಂದು ಒತ್ತಡ ಹಾಕಿದ್ದಾರೆ ಎಂದು ಹೇಳಲಾಗಿದೆ.

ಇನ್ನುಮುಂದೆ ಹೀಗೆಲ್ಲಾ ಮಾಡಬೇಡಿ. ಅರಸಿಕೆರೆಯಲ್ಲಿ ಪರಿಸ್ಥಿತಿ ಸರಿ ಇಲ್ಲ. ಶಾಂತಿ ಕದಡಬಹುದೆಂದು ಹೇಳಿದ್ದಾರೆನ್ನಲಾಗಿದೆ. ಈ ವಿಡಿಯೊವನ್ನು ವಕೀಲ ಬ್ರಿಜೇಶ್ ಕಾಳಪ್ಪ ಅವರು, ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ. ಕೊಲೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರ ಮೇಲೆ ಯಡಿಯೂರಪ್ಪನವರು ಪ್ರಭಾವ ಬೀರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...