alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಧಾನಿಯಲ್ಲಿ ಮರುಕಳಿಸಿದ ದುಷ್ಕರ್ಮಿಗಳ ಪುಂಡಾಟ

kallu car

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಲ್ಲು ತೂರಾಟ ನಡೆಸುವ ಪ್ರಕರಣ ನಗರದಲ್ಲಿ ಮತ್ತೆ ಮರುಕಳಿಸಿದ್ದು, 10 ಕ್ಕೂ ಹೆಚ್ಚು ವಾಹನಗಳನ್ನು ಹಾಳು ಮಾಡಲಾಗಿದೆ. ದುಷ್ಕರ್ಮಿಗಳು ಕಲ್ಲು, ರಾಡ್ ಗಳಿಂದ ವಾಹನಗಳನ್ನು ಜಖಂಗೊಳಿಸಿದ್ದಾರೆ.

ಬೆಂಗಳೂರಿನ ಬನಶಂಕರಿ ಬಡಾವಣೆಯ ಪ್ರಗತಿಪುರ ಎಂಬಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮನೆ ಎದುರು ನಿಲ್ಲಿಸಿದ ವಾಹನಗಳ ಮೇಲೆ ಏಕಾಏಕಿ ಕಲ್ಲು ತೂರಾಟ ನಡೆಸಿದೆ. ಕಬ್ಬಿಣದ ರಾಡ್ ಗಳಿಂದ ವಾಹನಗಳ ಗ್ಲಾಸ್ ಗಳನ್ನು ಒಡೆದುಹಾಕಿದ್ದಾರೆ. ಈ ಸಂದರ್ಭದಲ್ಲಿ ನಿಲ್ಲಿಸಿದ್ದ ವಾಹನವೊಂದರಲ್ಲಿ ಚಾಲಕನೊಬ್ಬ ಮಲಗಿದ್ದು, ಆತ ದುಷ್ಕರ್ಮಿಗಳ ಕೃತ್ಯ ಕಂಡು ಜೋರಾಗಿ ಕಿರುಚಿದ್ದಾನೆ. ಅವನ ಮೇಲೂ ಹಲ್ಲೆಗೆ ಮುಂದಾದ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ.

10ಕ್ಕೂ ಅಧಿಕ ವಾಹನಗಳನ್ನು ಹಾಳು ಮಾಡಿ, ಅಲ್ಲಿಂದ ಪರಾರಿಯಾಗಿದ್ದಾರೆ. ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಬೆಂಗಳೂರಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಲ್ಲು ತೂರಾಟ ನಡೆಸುವ ಘಟನೆ ಪದೇ ಪದೇ ಮರುಕಳಿಸುತ್ತಿದ್ದು, ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...