alex Certify
ಕನ್ನಡ ದುನಿಯಾ       Mobile App
       

Kannada Duniya

‘ಪ್ರತಾಪ್ ಸಿಂಹ ತಪ್ಪು ಗ್ರಹಿಕೆಯಿಂದ ಹೇಳಿರಬಹುದು’

ಬೀದರ್: ಸಂಸದ ಪ್ರತಾಪ್ ಸಿಂಹ ಅವರು ತಪ್ಪು ಗ್ರಹಿಕೆಯಿಂದ ಅಮಿತ್ ಶಾ ಬಗ್ಗೆ ಹೇಳಿರಬಹುದು. ಅವರೊಂದಿಗೆ ಮಾತನಾಡುತ್ತೇನೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಸಭೆ ನಡೆಸಿದ್ದ ಸಂದರ್ಭದಲ್ಲಿ ನಿಮ್ಮ ಹೋರಾಟ ಯಾವ ರೀತಿ ಇದೆ. ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಸರ್ಕಾರದ ಮೇಲೆ ಒತ್ತಡ ಹೇರುವ ಪ್ರಬಲ ಹೋರಾಟ ನಡೆದಿಲ್ಲ. ಯುವ ಮೋರ್ಚಾ ಉಗ್ರ ಪ್ರತಿಭಟನೆ ನಡೆಸಿದ್ದರೆ, ಟಿಯರ್ ಗ್ಯಾಸ್, ಲಾಠಿ ಚಾರ್ಜ್ ನಡೆಯುತ್ತಿತ್ತು ಎಂದು ಹೇಳಿದ್ದಾಗಿ ಸಂಸದ ಪ್ರತಾಪ್ ಸಿಂಹ ಅವರು ಹೇಳಿದ್ದರೆನ್ನಲಾದ ವಿಡಿಯೋ ವೈರಲ್ ಆಗಿದೆ.

ಆದರೆ, ವಿಡಿಯೋ ತಿರುಚಲಾಗಿದೆ ಎಂಬುದು ಪ್ರತಾಪ್ ಸಿಂಹ ಅವರ ಆರೋಪವಾಗಿದೆ. ಈ ಕುರಿತಾಗಿ ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಅಮಿತ್ ಶಾ ಅವರು ಬಿ.ಜೆ.ಪಿ. ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಿದ್ದಕ್ಕೆ ಪ್ರತಿಭಟನೆ ನಡೆಸುವಂತೆ, ಯಾವುದಕ್ಕೂ ಜಗ್ಗದೇ ಹೋರಾಟ ಮುಂದುವರೆಸಬೇಕೆಂದು ಸೂಚಿಸಿದ್ದರು. ಅದನ್ನು ಪ್ರತಾಪ್ ಸಿಂಹ ತಪ್ಪು ತಿಳಿದುಕೊಂಡು ಹೇಳಿರಬಹುದು. ನಾನು ಅವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ನಾನು ಮಾತನಾಡಿದ ವಿಡಿಯೋ ಪೂರ್ಣ ತೋರಿಸದ ಕಾರಣ ತಪ್ಪು ಗ್ರಹಿಕೆ ಆಗಿರಬಹುದು. ಪೂರ್ಣವಾಗಿ ತೋರಿಸಿದಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದು ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...