alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧಾನಪರಿಷತ್ ಸದಸ್ಯರಾಗಿ ಮೂವರ ಅವಿರೋಧ ಆಯ್ಕೆ ಖಚಿತ

ಅಕ್ಟೋಬರ್ 4ರಂದು ನಡೆಯಲಿರುವ ವಿಧಾನ ಪರಿಷತ್ ಉಪ ಚುನಾವಣೆಗೆ ಸ್ಪರ್ಧಿಸಿರುವ ಮೂವರು ಅಭ್ಯರ್ಥಿಗಳ ಅವಿರೋಧ ಆಯ್ಕೆ ಖಚಿತವಾಗಿದೆ.

ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಈ ಆಯ್ಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಗಳಾಗಿ ನಜೀರ್ ಅಹಮದ್ ಹಾಗೂ ಎಂ.ಸಿ. ವೇಣುಗೋಪಾಲ್, ಜೆಡಿಎಸ್ ಅಭ್ಯರ್ಥಿಯಾಗಿ ಎಚ್.ಎಂ. ರಮೇಶ್ ಗೌಡ ತಮ್ಮ ನಾಮಪತ್ರ ಸಲ್ಲಿಸಿದ್ದರು.

ಸಂಖ್ಯಾ ಬಲ ಇಲ್ಲದ ಕಾರಣ ಬಿಜೆಪಿ ಈ ಚುನಾವಣೆಯಿಂದ ಹಿಂದೆ ಸರಿದಿದ್ದು, ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಟಿ.ಡಿ.ಆರ್. ಹರಿಶ್ಚಂದ್ರ ಗೌಡ ಹಾಗೂ ವೆಂಕಟೇಶ್ವರ ಮಹಾಸ್ವಾಮೀಜಿ ಕಟಕದೊಂಡ ಅವರುಗಳ ನಾಮಪತ್ರ ತಿರಸ್ಕೃತಗೊಂಡಿರುವ ಕಾರಣ ಮೂವರ ಅವಿರೋಧ ಆಯ್ಕೆ ಖಚಿತವಾಗಿದೆ. ಸೆಪ್ಟಂಬರ್ 27 ರಂದು ಈ ಕುರಿತು ಅಧಿಕೃತವಾಗಿ ಘೋಷಣೆಯಾಗಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...