alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಕೋಟಾ ಶ್ರೀನಿವಾಸ್ ಪೂಜಾರಿ

ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಆಯ್ಕೆ ಮಾಡಲು ಬೆಂಗಳೂರಿನಲ್ಲಿ ಇಂದು ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಪಕ್ಷದ ವಿಧಾನ ಪರಿಷತ್ ಸದಸ್ಯರೊಂದಿಗೆ ಚರ್ಚೆ ನಡೆಸಿದ ಬಳಿಕ ಅಧಿಕೃತವಾಗಿ ಪ್ರಕಟಗೊಳ್ಳುವ ಸಾಧ್ಯತೆಯಿದೆ.

ಇಂದಿನ ಕೋರ್ ಕಮಿಟಿ ಸಭೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದಲ್ಲಿ ಪ್ರಸಕ್ತ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಹಾಗೂ ಮುಂಬರುವ ಲೋಕಸಭಾ ಚುನಾವಣೆಯ ಕುರಿತು ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...