alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವರ ಕೊಠಡಿಯಲ್ಲಿ ಇನ್ನೂ ರಾರಾಜಿಸುತ್ತಿದೆ ಮಾಜಿ ಸಿಎಂ ಫೋಟೋ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಅಧಿಕಾರಕ್ಕೇರಿದ್ದಾರೆ.

ಕಳೆದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಕಾಂಗ್ರೆಸ್ ನ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿದು ಈಗಾಗಲೇ ತಿಂಗಳು ಕಳೆಯುತ್ತಾ ಬಂದಿದೆ. ಆದರೆ ವಿಧಾನಸೌಧದ ಸಚಿವರ ಕೊಠಡಿಯಲ್ಲಿ ಈಗಲೂ ಸಿದ್ದರಾಮಯ್ಯನವರ ಫೋಟೋ ರಾರಾಜಿಸುತ್ತಿದೆ.

ಸಾರಿಗೆ ಸಚಿವರಾಗಿ ನೇಮಕಗೊಂಡಿರುವ ಡಿ.ಸಿ. ತಮ್ಮಣ್ಣನವರ ಕೊಠಡಿ ಸಂಖ್ಯೆ 329 ರಲ್ಲಿ ಹಾಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಫೋಟೋ ಬದಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಫೋಟೋ ಈಗಲೂ ಇರುವುದು ಮಾಧ್ಯಮಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದೆ.

ಸಚಿವರುಗಳ ಕೊಠಡಿಯಲ್ಲಿ ಮಹಾತ್ಮಾ ಗಾಂಧಿ, ಡಾ. ಬಿ.ಆರ್. ಅಂಬೇಡ್ಕರ್, ಬಸವಣ್ಣ, ರಾಷ್ಟ್ರಪತಿಗಳು, ಪ್ರಧಾನಿ ಹಾಗೂ ಹಾಲಿ ಮುಖ್ಯಮಂತ್ರಿಗಳ ಫೋಟೋ ಹಾಕುವುದು ವಾಡಿಕೆಯಾಗಿದ್ದು, ಆದರೆ ಅಧಿಕಾರಿಗಳು ಈವರೆಗೂ ಫೋಟೋ ಬದಲಾಯಿಸಲು ಮುಂದಾಗದಿರುವುದು ಕಂಡುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...