alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧಾನಸೌಧದ ಬಳಿ ಲಘು ಲಾಠಿ ಪ್ರಹಾರ

ರಾಜ್ಯದ ಮುಖ್ಯಮಂತ್ರಿಯಾಗಿ ಬಿಜೆಪಿಯ ಯಡಿಯೂರಪ್ಪನವರಿಗೆ ಪ್ರಮಾಣವಚನ ಸ್ವೀಕರಿಸಲು ಅವಕಾಶ ಮಾಡಿಕೊಟ್ಟಿರುವುದನ್ನು ವಿರೋಧಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ವಿಧಾನಸೌಧ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಮೊದಲಾದವರು ಪ್ರತಿಭಟಿಸಿದ್ದಾರೆ.

ಈ ಮಧ್ಯೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ವಿಧಾನಸೌಧಕ್ಕೆ ಮುಖ್ಯಮಂತ್ರಿಗಳು ಭೇಟಿ ನೀಡಿದ ವೇಳೆ ಪ್ರತಿಭಟನೆ ನಡೆಸಲು ಮುಂದಾದ ಜೆಡಿಎಸ್ ಕಾರ್ಯಕರ್ತರ ಮೇಲೆ ಲಘು ಲಾಠಿ ಪ್ರಹಾರ ನಡೆಸಿದ ಪೊಲೀಸರು ಗುಂಪನ್ನು ಚದುರಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...