alex Certify
ಕನ್ನಡ ದುನಿಯಾ       Mobile App
       

Kannada Duniya

ವಿಧಾನಸಭೆ ವಿಪಕ್ಷ ನಾಯಕರಾಗಿ ಯಡಿಯೂರಪ್ಪ

ನಿರೀಕ್ಷೆಯಂತೆ ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಯ್ಕೆಯಾಗಿದ್ದಾರೆ. ಉಪನಾಯಕರಾಗಿ ಗೋವಿಂದ ಕಾರಜೋಳ ಆಯ್ಕೆಯಾಗಿದ್ದಾರೆಂದು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಪ್ರಕಟಿಸಿದ್ದಾರೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಕೂಟ ಸರ್ಕಾರ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾರಣ ಅದನ್ನು ಸಮರ್ಥವಾಗಿ ಎದುರಿಸಲು ಬಿಜೆಪಿ ವರಿಷ್ಠರು ಯಡಿಯೂರಪ್ಪನವರಿಗೆ ವಿರೋಧ ಪಕ್ಷ ನಾಯಕನ ಸ್ಥಾನ ನೀಡಲು ಒಲವು ತೋರಿದ್ದರು.

ಈ ಹಿನ್ನೆಲೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿದ್ದ ಬಿ.ಎಸ್. ಯಡಿಯೂರಪ್ಪನವರು ವಿಪಕ್ಷ ನಾಯಕರಾಗಿ ಆಯ್ಕೆಯಾಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆವರೆಗೂ ಯಡಿಯೂರಪ್ಪನವರು ಪಕ್ಷದ ರಾಜ್ಯಾಧ್ಯಕ್ಷ ಹಾಗೂ ವಿಧಾನಸಭಾ ವಿರೋಧ ಪಕ್ಷದ ನಾಯಕ ಸ್ಥಾನವನ್ನು ನಿಭಾಯಿಸಲಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...