alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯ್ ಮಲ್ಯ ಪರ ದೇವೇಗೌಡರ ಬ್ಯಾಟಿಂಗ್

devegowda

ದೇಶದ ವಿವಿಧ ಬ್ಯಾಂಕ್ ಗಳಿಂದ ಪಡೆದಿರುವ 9 ಸಾವಿರ ಕೋಟಿ ರೂ. ಸಾಲವನ್ನು ಮದ್ಯದ ದೊರೆ ವಿಜಯ್ ಮಲ್ಯ ಪಾವತಿಸದೆ ದೇಶದಿಂದ ಪರಾರಿಯಾಗಿದ್ದಾರೆಂದು ಮಾಧ್ಯಮಗಳ ವರದಿ ಬಳಿಕ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ವಿಜಯ್ ಮಲ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.

ವಿಜಯ್ ಮಲ್ಯ ಮಣ್ಣಿನ ಮಗ. ಅದರಲ್ಲೂ ಕರ್ನಾಟಕದವರು. ಯಾವುದೇ ಕಾರಣಕ್ಕೂ ದೇಶ ತೊರೆಯುವುದಿಲ್ಲವೆಂದು ಹೇಳಿರುವ ದೇವೇಗೌಡರು, ದೇಶದ ಬಹುತೇಕ ವಿಮಾನಯಾನ ಸಂಸ್ಥೆಗಳು ನಷ್ಟದಲ್ಲಿದ್ದು, ಅದೇ ರೀತಿ ವಿಜಯ್ ಮಲ್ಯ ಅವರ ವ್ಯವಹಾರದಲ್ಲೂ ಆಗಿದೆ ಎಂದು ಹೇಳಿದ್ದಾರೆ.

ವಿಜಯ್ ಮಲ್ಯ ಒಬ್ಬ ಅಂತರಾಷ್ಟ್ರೀಯ ಮಟ್ಟದ ಉದ್ಯಮಿಯಾಗಿದ್ದು, ಅವರನ್ನು ಗುರಿಯಾಗಿಸಿಕೊಂಡಿರುವುದು ಸರಿಯಲ್ಲ. ತಮ್ಮೆಲ್ಲಾ ಸಮಸ್ಯೆಗಳಿಂದ ಅವರು ಶೀಘ್ರದಲ್ಲೇ ಹೊರ ಬರಲಿದ್ದಾರೆಂಬ ವಿಶ್ವಾಸವನ್ನು ದೇವೇಗೌಡರು ಮಾಧ್ಯಮ ಪ್ರತಿನಿಧಿಗಳ ಬಳಿ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...