alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಚಾರದ ವೇಳೆಯೇ ಕುಸಿದುಬಿದ್ದ ಬಿ.ಜೆ.ಪಿ. ಶಾಸಕ ಆಸ್ಪತ್ರೆಗೆ ದಾಖಲು

ಬೆಂಗಳೂರು: ಜಯನಗರ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ವೇಳೆಯಲ್ಲೇ ಶಾಸಕ ವಿಜಯಕುಮಾರ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಬೆಳಿಗ್ಗೆಯಿಂದಲೂ ಪ್ರಚಾರದಲ್ಲಿ ನಿರತರಾಗಿದ್ದ ವಿಜಯಕುಮಾರ್ ಸಂಜೆ ಮತಯಾಚನೆ ಮಾಡುವ ಸಂದರ್ಭದಲ್ಲಿ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರ ಬೆಂಬಲಿಗರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ.

ಜಯನಗರ ಕ್ಷೇತ್ರದಲ್ಲಿ ಬಿ.ಜೆ.ಪಿ. ಅಭ್ಯರ್ಥಿಯಾಗಿರುವ ವಿಜಯಕುಮಾರ್ ಚುನಾವಣೆ ಕಾರಣದಿಂದ ಬಿಡುವಿಲ್ಲದೇ ಪ್ರಚಾರದಲ್ಲಿ ನಿರತರಾಗಿದ್ದರಿಂದ ಬಳಲಿದ್ದು, ಆಯಾಸದಿಂದ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...