alex Certify
ಕನ್ನಡ ದುನಿಯಾ       Mobile App
       

Kannada Duniya

ಪಲ್ಸರ್ ಬೈಕ್ ಡಿಕ್ಕಿಯಾಗಿ ಬಾಲಕ ಸ್ಥಳದಲ್ಲೇ ಸಾವು

ವಿಜಯಪುರ: ಪಲ್ಸರ್ ಬೈಕ್ ಡಿಕ್ಕಿಯಾಗಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಬಳಿ ನಡೆದಿದೆ.

ಸುದೀಪ ಪಟ್ಟಣ(7) ಮೃತಪಟ್ಟ ಬಾಲಕ. ಚಿಕ್ಕಸಿಂದಗಿಯ ರಾಷ್ಟ್ರೀಯ ಹೆದ್ದಾರಿ 218 ರಲ್ಲಿ ಜಿಲ್ಲಾ ಪಂಚಾಯಿತಿ ಸಂಬಂಧಿಕರೊಬ್ಬರಿಗೆ ಸೇರಿದ ಬೈಕ್ ಅತಿವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದು, ಬಾಲಕ ಮೃತಪಟ್ಟಿದ್ದಾನೆ.

ಅಪಘಾತದ ಬಳಿಕ ಬೈಕ್ ಸಮೇತ ಸವಾರ ಪರಾರಿಯಾಗಿದ್ದಾನೆ. ಮೃತ ಬಾಲಕನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಅಪಘಾತಕ್ಕೆ ಕಾರಣವಾದ ಪಲ್ಸರ್ ಬೈಕ್ ಗೆ ದಾಖಲೆಗಳು ಇಲ್ಲದ ಕಾರಣ, ಜಿಲ್ಲಾ ಪಂಚಾಯಿತಿ ಸದಸ್ಯೆಯ ಪತಿ ಬೇರೊಂದು ಸ್ಪ್ಲೆಂಡರ್ ಬೈಕ್ ಅನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಬಾಲಕನ ಕಡೆಯವರು ದೂರಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...