alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯಪುರದಲ್ಲಿ ನಡೆದಿದೆ ಅಮಾನವೀಯ ಘಟನೆ

vijypur-r

ವಿಜಯಪುರ: ಪ್ರೀತಿಸಿದ ಜೋಡಿ ಮನೆ ಬಿಟ್ಟು ಹೋಗಿದ್ದಕ್ಕೆ ಯುವಕನ ಕುಟುಂಬದವರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿದ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಸಿಂದಗಿ ತಾಲ್ಲೂಕಿನ ಹಾಳಗುಂಡಕನಾಳ ಗ್ರಾಮದ ಅನ್ಯ ಕೋಮಿಗೆ ಸೇರಿದ ಯುವಕ ಹಾಗೂ ಯುವತಿ ಪ್ರೀತಿಸಿದ್ದು, ಮನೆ ಬಿಟ್ಟು ಹೋಗಿದ್ದಾರೆ.

ಇದರಿಂದ ಆಕ್ರೋಶಗೊಂಡ ಯುವತಿಯ ಮನೆಯವರು ಯುವಕನ ಮನೆ ಮೇಲೆ ದಾಳಿ ಮಾಡಿದ್ದಾರೆ. ಯುವಕನ ತಂದೆಯ ಮೇಲೆ ಹಲ್ಲೆ ಮಾಡಿದ್ದಾರೆ.

ತಡೆಯಲು ಬಂದ ಯುವಕನ ತಮ್ಮನ ಮೇಲೂ ಹಲ್ಲೆ ನಡೆಸಿದ್ದಾರೆ. ಇಬ್ಬರನ್ನೂ ಮರಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಇಷ್ಟೆಲ್ಲಾ ಕಣ್ಣೆದುರಲ್ಲೇ ನಡೆದರೂ ಗ್ರಾಮಸ್ಥರು ತಡೆದಿಲ್ಲ.

ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...