alex Certify
ಕನ್ನಡ ದುನಿಯಾ       Mobile App
       

Kannada Duniya

ಮರ್ಮಾಂಗಕ್ಕೆ ಪೆಟ್ರೋಲ್ ಸುರಿದು ಅಮಾನವೀಯ ಕೃತ್ಯ

ವಿಜಯಪುರ: ಆಘಾತಕಾರಿ ಘಟನೆಯೊಂದರಲ್ಲಿ ಪೊಲೀಸರೇ ಮರ್ಮಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದು, ಭಯಗೊಂಡ ಅಪ್ರಾಪ್ತ ಚಳಿ ಜ್ವರ ಬಂದು ಆಸ್ಪತ್ರೆಗೆ ದಾಖಲಾಗಿದ್ದಾನೆ.

ವಿಜಯಪುರದ ಗ್ಯಾಂಗಬಾಡಿ ನಿವಾಸಿಯಾಗಿರುವ ಅಪ್ರಾಪ್ತನಿಗೆ ಆತನ ಸ್ನೇಹಿತ ಕಳವು ಮಾಡಿದ್ದ ಚಿನ್ನಾಭರಣ ಕೊಟ್ಟಿದ್ದಾನೆ. ಈತನೇ ಕಳವು ಮಾಡಿರಬಹುದೆಂದು ಶಂಕಿಸಿದ ಪೊಲೀಸರು ಅಪ್ರಾಪ್ತನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.

ಆತನನ್ನು ಹೆದರಿಸಲು ಮರ್ಮಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದು, ಇದರಿಂದ ಭಯಭೀತನಾದ ಬಾಲಕನಿಗೆ ಜ್ವರ ಬಂದು ಆಸ್ಪತ್ರೆಗೆ ಸೇರಿಸಲಾಗಿದೆ. ಪೊಲೀಸರು ವಿಚಾರಣೆ ನಡೆಸಲು ಅಭ್ಯಂತರವಿಲ್ಲ. ಆದರೆ, ಮರ್ಮಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಮುಂದಾಗಿದ್ದು ಸರಿಯಲ್ಲ ಎಂಬ ಮಾತುಗಳು ಕೇಳಿ ಬಂದಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...