alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳ್ಳಂಬೆಳಿಗ್ಗೆ ರೌಡಿಶೀಟರ್ ಮೇಲೆ ಫೈರಿಂಗ್

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. 2 ದಿನಗಳ ಹಿಂದಷ್ಟೇ ಶಶಿಧರ ಮುಂಡೇವಾಡಿ ಮೇಲೆ ಫೈರಿಂಗ್ ಮಾಡಲಾಗಿತ್ತು. ಇಂದು ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆಗೆ ಮುಂದಾದ ರೌಡಿಶೀಟರ್ ಯೂನಿಸ್ ಅಕ್ಲಾಸ್ ಪಟೇಲ್ ಕಾಲಿಗೆ ಗುಂಡೇಟು ಬಿದ್ದಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ನವಭಾಗ್ ನಗರದಲ್ಲಿದ್ದ ಯೂನಿಸ್ ನನ್ನು ಬಂಧಿಸಲು ಗಾಂಧಿಚೌಕ್ ಠಾಣೆ ಪೊಲೀಸರು ತೆರಳಿದ್ದಾರೆ.

ಆರೋಪಿ ಪರಾರಿಯಾಗಲೆತ್ನಿಸಿದ್ದು, ಆತನನ್ನು ಹಿಡಿಯಲು ಮುಂದಾದ ಪೊಲೀಸ್ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ. ಪಿ.ಎಸ್.ಐ. ಆರೀಫ್, 2 ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ, ಆರೋಪಿ ಪರಾರಿಯಾಗಲೆತ್ನಿಸಿದಾಗ ಮತ್ತೊಂದು ಗುಂಡು ಹಾರಿಸಿದ್ದು, ಆತನ ಕಾಲಿಗೆ ಹೊಕ್ಕಿದೆ. ಕೆಳಗೆ ಬಿದ್ದ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನವಭಾಗ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...