alex Certify
ಕನ್ನಡ ದುನಿಯಾ       Mobile App
       

Kannada Duniya

ಹಳ್ಳದ ನೀರಲ್ಲಿ ಕೊಚ್ಚಿ ಹೋದ ವಿದ್ಯಾರ್ಥಿನಿ

vijyupur-rr

ವಿಜಯಪುರ: ಹಳ್ಳದ ನೀರಿನಲ್ಲಿ ಬಾಲಕಿಯೊಬ್ಬಳು ಕೊಚ್ಚಿ ಹೋಗಿದ್ದು, ಮತ್ತೊಬ್ಬಳನ್ನು ಸ್ಥಳೀಯರು ರಕ್ಷಿಸಿದ್ದಾರೆ.

ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟ್ಯಾಳ ಗ್ರಾಮದ ಸಮೀಪದಲ್ಲಿರುವ ಹಳ್ಳದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕಿ ಐಶ್ವರ್ಯಾ(9) ಹಳ್ಳ ದಾಟುವಾಗ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾಳೆ. ಆಕೆಯೊಂದಿಗೆ ಇದ್ದ ಗೀತಾ(7)ಳನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಹಳ್ಳದಲ್ಲಿ ಕೊಚ್ಚಿ ಹೋದ ಐಶ್ವರ್ಯಾಗಾಗಿ ಅಗ್ನಿಶಾಮಕದಳ ಸಿಬ್ಬಂದಿ ಮತ್ತು ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಕಳೆದ 2 ದಿನಗಳಿಂದ ಭಾರೀ ಮಳೆಯಾಗಿದ್ದು, ಕೊಟ್ಯಾಳ ಬಳಿಯ ಹಳ್ಳ ತುಂಬಿ ಹರಿಯುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...