alex Certify
ಕನ್ನಡ ದುನಿಯಾ       Mobile App
       

Kannada Duniya

ವೈದ್ಯರಿಲ್ಲದ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ

ವಿಜಯಪುರ: ಹೆರಿಗೆ ನೋವಿನಿಂದ ಆಸ್ಪತ್ರೆಗೆ ಬಂದಿದ್ದ ಗರ್ಭಿಣಿಗೆ, ಗ್ರಾಮಸ್ಥರೇ ಹೆರಿಗೆ ಮಾಡಿಸಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಇಂಚಗೇರಿಯಲ್ಲಿ ನಡೆದಿದೆ.

ಜಿಗಜೀವಣೀ ಗ್ರಾಮದ ಶಶಿಕಲಾ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಗ್ರಾಮದ ಆಸ್ಪತ್ರೆಗೆ ಕರೆತರಲಾಗಿದ್ದು, ಅಲ್ಲಿ ವೈದ್ಯರಿಲ್ಲದ ಕಾರಣ, ಇಂಚಗೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಲ್ಲಿಯೂ ವೈದ್ಯರು, ಸಿಬ್ಬಂದಿ ಇರಲಿಲ್ಲ. ಈ ವೇಳೆಗೆ ಶಶಿಕಲಾ ಅವರಿಗೆ ಹೆರಿಗೆ ನೋವು ಜಾಸ್ತಿಯಾಗಿದ್ದು, ದಿಕ್ಕು ತೋಚದಂತಾದ ಕುಟುಂಬದವರು ಗ್ರಾಮದ ಯುವಕರ ನೆರವು ಕೇಳಿದ್ದಾರೆ.

ಯುವಕರು ಗ್ರಾಮದ ಮಹಿಳೆಯರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಮಹಿಳೆಯರು ಶಶಿಕಲಾ ಅವರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಗ್ರಾಮದ ಯುವಕರು ಹಾಗೂ ಮಹಿಳೆಯರು ತೋರಿದ ಕಾಳಜಿಯಿಂದ ಶಶಿಕಲಾ ಗಂಡುಮಗುವಿಗೆ ಜನ್ಮ ನೀಡಿದ್ದು, ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...