alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್! ಬಾಯಿಗೆ ಬಟ್ಟೆ ತುರುಕಿ ಪೈಶಾಚಿಕ ಕೃತ್ಯ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಕಳೆದ ಡಿಸೆಂಬರ್ 19 ರಂದು ವಿಜಯಪುರ ಆದರ್ಶನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಕಾಮುಕರು ಪೈಶಾಚಿಕ ಕೃತ್ಯವೆಸಗಿದ ಘಟನೆ ಮಾಸುವ ಮೊದಲೇ ಮತ್ತೊಂದು ಘಟನೆ ಮರುಕಳಿಸಿದೆ.

ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಚಡಚಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೀರು ಕೇಳುವ ನೆಪದಲ್ಲಿ ಮನೆಯೊಳಗೆ ನುಗ್ಗಿದ ಕಾಮುಕ, ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಪರಿಚಯಸ್ಥನೇ ಆಗಿದ್ದ ಕಾಮುಕ ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ಎಸಗಿದ್ದು, ಆತನಿಗೆ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದ ಮೂವರು ಸ್ನೇಹಿತರು ಸಾಥ್ ನೀಡಿದ್ದಾರೆ. ಅತ್ಯಾಚಾರ ಎಸಗಿ ಬಾಲಕಿಗೆ ಬೆದರಿಕೆ ಹಾಕಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಚಡಚಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...