alex Certify
ಕನ್ನಡ ದುನಿಯಾ       Mobile App
       

Kannada Duniya

ಮಲಗಿದ್ದಾಗಲೇ ನಡೀತು ದುರಂತ

ವಿಜಯಪುರ: ಮನೆ ಗೋಡೆ ಕುಸಿದು ಇಬ್ಬರು ಸಾವು ಕಂಡ ಘಟನೆ, ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಭೈರವಾಡಗಿ ಗ್ರಾಮದಲ್ಲಿ ನಡೆದಿದೆ.

60 ವರ್ಷದ ಶಂಕ್ರಮ್ಮ, ಅವರ ಪುತ್ರಿ ಮಹಾದೇವಿ(31) ಮೃತಪಟ್ಟವರು. ಮನೆಯ ಹೊರಗೆ ಮಲಗಿದ್ದ ಶಂಕ್ರಮ್ಮ ಅವರ ಪುತ್ರ ಅಪಾಯದಿಂದ ಪಾರಾಗಿದ್ದಾರೆ.

ಕಳೆದ 2 ದಿನಗಳಿಂದ ಸುರಿದ ಭಾರೀ ಮಳೆಗೆ ಮನೆಯ ಗೋಡೆ ನೆನೆದಿದ್ದು, ಬೆಳಗಿನ ಜಾವ 4 ಗಂಟೆ ಸುಮಾರಿಗೆ ಕುಸಿದು ಬಿದ್ದಿದೆ.

ಮಲಗಿದಲ್ಲೇ ಶಂಕ್ರಮ್ಮ ಮತ್ತು ಮಹಾದೇವಿ ಸಾವನ್ನಪ್ಪಿದ್ದಾರೆ. ಬಸವನಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ತಾಲ್ಲೂಕು ಆಡಳಿತದ ಅಧಿಕಾರಿಗಳು ತೆರಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...