alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ನ್ಯೂಸ್! 1 ನೇ ಕ್ಲಾಸ್ ಪುಟಾಣಿ ಆತ್ಮಹತ್ಯೆ…?

ವಿಜಯಪುರ: ಆಘಾತಕಾರಿ ಘಟನೆಯೊಂದರಲ್ಲಿ 1 ನೇ ತರಗತಿ ಓದುತ್ತಿದ್ದ ಬಾಲಕ ಶಾಲೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಜಯಪುರ ಜಿಲ್ಲೆ ಸಿಂದಗಿಯ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿದ್ದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದು, ಶಾಲಾ ಆಡಳಿತ ಮಂಡಳಿಯವರು ಪೊಲೀಸರಿಗೆ ಮಾಹಿತಿ ನೀಡದೇ, ಕಲಬುರಗಿ ಜಿಲ್ಲೆ ಜೇವರ್ಗಿಗೆ ಮೃತದೇಹ ಕೊಂಡೊಯ್ದು ಪೋಷಕರಿಗೆ ಒಪ್ಪಿಸಿದ್ದಾರೆ.

ಅಲ್ಲಿಂದ ವಾಪಸ್ ಶವವನ್ನು ಶಾಲೆಗೆ ತೆಗೆದುಕೊಂಡು ಬಂದ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. 1 ನೇ ತರಗತಿ ಓದುತ್ತಿದ್ದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವುದು ಹೇಗೆ ಎಂದು ಪ್ರಶ್ನಿಸಿದ್ದು, ಬಾಲಕನ ಸಾವಿನ ಕುರಿತಾಗಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೇ ಶಾಲಾ ಆಡಳಿತ ಮಂಡಳಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು,  ಸಿಂದಗಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...